ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ಅವರು ಭಾನುವಾರ ತಾಲೂಕಿನ ಚಿಕ್ಕಅಗ್ರಹಾರ ವಲಯ ಅರಣ್ಯ ವ್ಯಾಪ್ತಿ ಹಾಗೂ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ವಿವಿಧ ಕಾಮಗಾರಿ ಸೇರಿ ₹1 ಕೋಟಿ 10 ಲಕ್ಷ ವೆಚ್ಚದಲ್ಲಿ ಅರಣ್ಯ ಸಿಬ್ಬಂದಿಗಳ ವಸತಿ ಗೃಹ ಉದ್ಘಾಟನೆ, ಕಂದಾಯ ಇಲಾಖೆಯ ಪೋಡಿ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಪಶ್ಚಿಮ ಘಟ್ಟದಲ್ಲಿ ಆನೆಗಳ ಕಾಟ ಜಾಸ್ತಿಯಾಗಿ ನೂರಾರು ಆನೆಗಳು ಗ್ರಾಮಕ್ಕೆ ದಾಳಿ ಇಡುತ್ತಿದೆ. ಈ ಬಗ್ಗೆ ಮಲೆನಾಡು ಭಾಗದ ಶಾಸಕರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲೇ ಮಲೆನಾಡು ಭಾಗದ ಶಾಸಕರ ನಿಯೋಗದೊಂದಿಗೆ ಮುಖ್ಯ ಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.ಅಧಿವೇಶನದಲ್ಲೂ ಪ್ರಸ್ತಾಪ ಮಾಡುತ್ತೇನೆ.ಪ್ರಾಣಿ ಹಾಗೂ ಮನುಷ್ಯರ ನಡುವೆ ಸಂಘರ್ಷ ಜಾಸ್ತಿಯಾಗಿದೆ. ಆನೆಗಳು ನಾಡಿಗೆ ಬಾರದಂತೆ ಆನೆ ಕಂದಕ, ಸೋಲಾರ್ ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ. ರೇಲ್ವೆ ಹಳಿಯ ಬ್ಯಾರಿಕೇಡ್ ಸಹ ಮಾಡುತ್ತಿದ್ದೇವೆ. ಅರಣ್ಯ ಸಿಬ್ಬಂದಿಗಳಿಗೆ ವನ್ಯ ಜೀವಿಗಳ ಬಗ್ಗೆ ಸಾಕಷ್ಟು ಮಾಹಿತಿ ನೀಡುತ್ತಿದ್ದೇವೆ. ನರಸಿಂಹರಾಜಪುರ ತಾಲೂಕಿನಲ್ಲೂ ಕೆರೆಗದ್ದೆಯ ಉಮೇಶ ಎಂಬುವರು ಆನೆಯ ದಾಳಿಯಿಂದ ಮೃತಪಟ್ಟಿದ್ದು, ಅವರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದೇನೆ ಎಂದರು.
2005-06ರಲ್ಲಿ ಅರಣ್ಯ ಹಕ್ಕು ಕಾಯ್ದೆ ಬಂದಿದ್ದು, ಇದರಡಿ ಯಾವ ರೈತರ ಜಮೀನು ಮಂಜೂರು ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿಗೂ ಮನವಿ ಸಲ್ಲಿಸಿದ್ದೇವೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯ ನಂತರ ಹೊಸದಾಗಿ ಅರಣ್ಯ ಹಕ್ಕು ಕಾಯ್ದೆ ಸಮಿತಿ ರಚನೆ ಮಾಡಲಾಗುವುದು ಎಂದರು.
ಒತ್ತುವರಿ ಸಂಬಂಧಿಸಿದ ಭೂಮಿಯ ಬಗ್ಗೆ ತೀರ್ಮಾನಿಸಲು ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಸಮಿತಿಗಳನ್ನು ರಚಿಸಲಾಗುವುದು. ಒತ್ತುವರಿ ಭೂಮಿಯಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ ಕಟ್ಟಡ, ಸರ್ಕಾರಿ ಕಟ್ಟಡಗಳನ್ನು ಬಿಟ್ಟು ಸರ್ವೆ ಮಾಡಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಅರಣ್ಯ-ಕಂದಾಯ ಭೂಮಿಯ ಸಮಸ್ಯೆಗಳನ್ನು ಪ್ರಾಮಾಣಿಕತೆಯಿಂದ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಚಿಕ್ಕಮಗಳೂರು ಕ್ಷೇತ್ರದ ಶಾಸಕ ತಮ್ಮಯ್ಯ, ನಾಗಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾ ಬೆನ್ನಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುರೈಯಾ ಬಾನು, ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್, ಜಿಲ್ಲಾಧಿಕಾರಿ ಮೀನಾನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಂ ಆಮಟೆ, ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರಕಾಶ್ ಸಿಂಗ್, ಕೊಪ್ಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್ ಮತ್ತಿತರರು ಇದ್ದರು.