ನೆಲ್ಯಹುದಿಕೇರಿ ದೇವಾಲಯ ಸಮೀಪ ಸ್ಮಶಾನ ನಿರ್ಮಾಣ: ಪ್ರತಿಭಟನೆ

KannadaprabhaNewsNetwork |  
Published : Oct 17, 2024, 12:02 AM IST
ರ | Kannada Prabha

ಸಾರಾಂಶ

ನೆಲ್ಯಹುದಿಕೇರಿ ಸತ್ಯನಾರಾಯಣ ದೇವಾಲಯದ ಸಮೀಪ ಸ್ಥಳದಲ್ಲಿ ಹಿಂದೂ ಸ್ಮಶಾನ ನಿರ್ಮಾಣಕ್ಕೆ ಮುಂದಾಗಿರುವುದರ ವಿರುದ್ಧ ದೇವಾಲಯ ಸಮಿತಿ ಹಾಗೂ ದೇವಾಲಯ ಭಕ್ತರಿಂದ ಮೌನ ಮರೆವಣಿಗೆ ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ನೆಲ್ಯಹುದಿಕೇರಿ ಸತ್ಯನಾರಾಯಣ ದೇವಾಲಯದ ಸಮೀಪ ಸ್ಥಳದಲ್ಲಿ ಹಿಂದೂ ಸ್ಮಶಾನ ನಿರ್ಮಾಣಕ್ಕೆ ಮುಂದಾಗಿರುವುದರ ವಿರುದ್ಧ ದೇವಾಲಯ ಸಮಿತಿ ಹಾಗೂ ದೇವಾಲಯ ಭಕ್ತರಿಂದ ಮೌನ ಮರೆವಣಿಗೆ ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಯಿತು.

ನೆಲ್ಯಹುದಿಕೇರಿ ಸತ್ಯನಾರಾಯಣ ದೇವಾಲಯದಿಂದ ಮೌನ ಮೆರವಣಿಗೆ ನಡೆಸಿದ ದೇವಾಲಯ ಸಮಿತಿ ಹಾಗೂ ಗ್ರಾಮಸ್ಥರು ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ದೇವಾಲಯದ ಪ್ರಾವಿತ್ಯತೆ ಹಾಳು ಮಾಡಲು ಕೆಲವರು ಶ್ರಮಿಸುತ್ತಿದ್ದು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಅತ್ಯಂತ ಪುರಾತನವಾದ ಶ್ರೀಸತ್ಯನಾರಾಯಣ ದೇಗುಲದ ಸ್ವಾಧೀನದಲ್ಲಿರುವ ಜಾಗದಲ್ಲೇ ಮಸಣಿಕಮ್ಮ ದೇವರ ಆರಾಧನೆಯ ಸ್ಥಾನವಿದೆ. ಇದರ ಸಮೀಪವೇ ರುದ್ರಭೂಮಿ ನಿರ್ಮಾಣಕ್ಕೆ ಶ್ರಮಿಸುತ್ತಿರುವುದು ಖಂಡನೀಯ. ಮುಂದೆ ಈ ರೀತಿ ಪ್ರಯತ್ನಕ್ಕೆ ಮುಂದಾದಲ್ಲಿ ಸಂಘ ಸಂಸ್ಥೆಗಳು, ಸಾರ್ವಜನಿಕರು ದೇವಾಲಯದ ಭಕ್ತರನ್ನು ಒಗ್ಗೂಡಿಸಿ ಜಿಲ್ಲಾ ಮಟ್ಟದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.

ಸಾಂತ್ವನ ಮಹಿಳಾ ಸಹಾಯವಾಣಿ-5232 ಪ್ರಕರಣ ಇತ್ಯರ್ಥ: ಮಡಿಕೇರಿ: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೇಂದ್ರದಲ್ಲಿ ಈವರೆಗೆ 5248 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 5232 ಪ್ರಕರಣಗಳು ಇತ್ಯರ್ಥಗೊಂಡಿವೆ.2024-2ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್‌ನಿಂದ 2024 ರ ಏಪ್ರಿಲ್ 1ರಿಂದ ಸೆಪ್ಟೆಂಬರ್ ಅಂತ್ಯದ ವರೆಗೆ 130 ಪ್ರಕರಣಗಳು ದಾಖಲಾಗಿ 117 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 13 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತವೆ. ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರು.1,55,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.ಮಹಿಳಾ ಸಹಾಯವಾಣಿ ಪ್ರಯೋಜನ ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939.

PREV

Recommended Stories

ಅನನ್ಯಾ ಭಟ್‌ ಅರವಿಂದ್‌-ವಿಮಲಾ ಪುತ್ರಿ, ಕೊ* ಆಗಿದ್ದು ನಿಜ: ಸುಜಾತಾ
ಬುಕರ್‌ ವಿಜೇತ ಬಾನುರಿಂದ ದಸರಾ ಉದ್ಘಾಟನೆ: ಸಿಎಂ