ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಈಡಿಗರದೊಡ್ಡಿ, ಚಾಕನಕೆರೆ ಹಾಗೂ ನವಿಲೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಸಂಪರ್ಕ ಸೇತುವೆ, ಕೆರೆ ಬಂಡು ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ತಾಲೂಕು ಕ್ರೀಡಾಂಗಣದ ಮೇಲ್ದರ್ಜೆಗೆ ಏರಿಸುವ ಬಗ್ಗೆಯೂ ಸದನದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಕಾರಾತ್ಮಕ ಉತ್ತರ ಸಿಕ್ಕಿದೆ ಎಂದರು.ಶಾಸಕನಾಗಿ ಆಯ್ಕೆಯಾದ ಬಳಿಕ ಪ್ರತಿ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಎಲ್ಲಾ ಗ್ರಾಮಗಳಲ್ಲೂ ರೀ ಸರ್ವೇ ಸಮಸ್ಯೆ ಬಗ್ಗೆ ಹೆಚ್ಚು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಸದನದ ಕಲಾಪ ವೇಳೆ ಸಚಿವರ ಗಮನ ಸೆಳೆಯಲಾಗಿತ್ತು. ಕಂದಾಯ ಸಚಿವ ಕೃಷ್ಣ ಭೈರೇಗೌಡರು ಇನ್ನು ಕೆಲ ದಿನಗಳಲ್ಲಿ ಈ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.
ಕಳೆದ 15 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳು ಸಹ ರೈತರ ಸಮಸ್ಯೆ ಬಗೆಹರಿಸಲು ವಿಫಲರಾಗಿದ್ದಾರೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕೂಡ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.