ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ೧೯೯೪ರಲ್ಲಿ ನಡೆದ ಸಮ್ಮೇಳನದಲ್ಲಿ ಒಂದಷ್ಟು ಹಣ ಉಳಿಸಿ ಪರಿಷತ್ ಭವನ, ಪ್ರತಿಮೆ ನಿರ್ಮಾಣ, ಕಲಾ ಮಂದಿರ, ಜಾನಪಪದ ಲೋಕಕ್ಕೆ ದೇಣಿಗೆ ನೀಡಲಾಗಿತ್ತು. ಮೂರನೇ ಸಮ್ಮೇಳನವೂ ಅದ್ದೂರಿಯಾಗಿ ನಡೆದಿದೆ. ಇದನ್ನು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಸುವ ಸಲುವಾಗಿ ಕನ್ನಡ ಭವನ ನಿರ್ಮಾಣ ಮಾಡಲು ನಿರ್ಧರಿಸಿದ್ದೇವೆ ಎಂದರು.
ಸಮ್ಮೇಳನಕ್ಕಾಗಿ ಸರ್ಕಾರ ನೀಡಿರುವ ಅನುದಾನ ಹಾಗೂ ದಾನಿಗಳಿಂದ ಬಂದ ಹಣವನ್ನು ಕ್ರೋಢೀಕರಿಸಿ ಖರ್ಚು ವೆಚ್ಚ ನಿಭಾಯಿಸಿದ್ದೇವೆ. ಎಷ್ಟು ಹಣ ಉಳಿದಿದೆ ಎಂಬುದನ್ನು ಲೆಕ್ಕ ಹಾಕಿ, ನಮ್ಮೆಲ್ಲಾ ಶಾಸಕರೂ ಒಟ್ಟಾಗಿ ಸೇರಿ ಕನ್ನಡ ಭವನ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರದಲ್ಲೇ ಅದರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.ಶಾಸಕರು, ಅಧಿಕಾರಿ ವರ್ಗದವರಿಂದ ಹಿಡಿದು ಎಲ್ಲರ ಹೊಂದಾಣಿಕೆ ಮತ್ತು ಸಹಿಷ್ಣುತಾ ಮನೋಭಾವದಿಂದ ಸಮ್ಮೇಳನ ಯಶಸ್ವಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಯಾವುದಕ್ಕೂ ಕೊರತೆಯಾಗದಂತೆ ಎಲ್ಲ ರೀತಿಯ ಸಹಕಾರವನ್ನು ಸರ್ಕಾರದಿಂದ ನೀಡಿದ್ದು ಇದು ನಮಗೆ ಮತ್ತಷ್ಟು ಬಲ ತಂದುಕೊಟ್ಟಿತ್ತು ಎಂದು ವಿವರಿಸಿದರು.
ಶಾಸಕರಾದ ಪಿ.ರವಿಕುಮಾರ್, ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನವೀರ್ ಆಸೀಫ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಕಸಾಪ ಸಂಚಾಲಕಿ ಮೀರಾ ಶಿವಲಿಂಗಯ್ಯ ಇತರರಿದ್ದರು.