13 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ

KannadaprabhaNewsNetwork |  
Published : Jan 13, 2024, 01:30 AM IST
ಫೋಟೋ 12ಮಾಗಡಿ1: ಮಾಗಡಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಶಾಸಕ ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ಮಾಗಡಿ: ಶಿಥಿಲಾವಸ್ಥೆಯಲ್ಲಿರುವ ಮಿನಿ ವಿಧಾನಸೌಧ ಕಟ್ಟಡವನ್ನು ನೆಲಸಮಗೊಳಿಸಿ 13 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಮಾಗಡಿ: ಶಿಥಿಲಾವಸ್ಥೆಯಲ್ಲಿರುವ ಮಿನಿ ವಿಧಾನಸೌಧ ಕಟ್ಟಡವನ್ನು ನೆಲಸಮಗೊಳಿಸಿ 13 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.

ತಾಲೂಕು ಕಚೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮಾಗಡಿಯಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಈ ವರ್ಷ 13 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ. ರೆಕಾರ್ಡ್‌ ರೋಮನ್ನು ಡಿಜಿಟಲಿಕರಣ ಮಾಡಿ ಫೆಬ್ರವರಿಯಲ್ಲಿ ಚಾಲನೆ ನೀಡಿ ಪ್ರತಿಯೊಂದು ದಾಖಲೆಗಳನ್ನು ಜೋಪಾನವಾಗಿ ಸಂಗ್ರಹಿಸಿಡಲಾಗುತ್ತದೆ. ಹೋಬಳಿವಾರು ವಿಎಗಳನ್ನು ನೇಮಿಸಿ ಸಾರ್ವಜನಿಕರಿಗೆ ದಾಖಲಾತಿಗಳನ್ನು ಗೊಂದಲಗಳಿಲ್ಲದಂತೆ ವಿತರಿಸಲಾಗುವುದು ಎಂದರು.

ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಸೇರಿ ಅರ್ಥಪೂರ್ಣವಾಗಿ ಜನವರಿ 26ರಂದು ಪಟ್ಟಣದ ಕೋಟೆ ಮೈದಾನದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವ ಆಚರಿಸೋಣ. ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು. ಯಾವುದೇ ಗೊಂದಲಗಳು ಇಲ್ಲದಂತೆ ಕಾರ್ಯಕ್ರಮ ಆಯೋಜಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಶಾಲಾ ಮಕ್ಕಳಿಂದ ಪಥಸಂಚಲನ ಶಿಸ್ತುಬದ್ಧವಾಗಿ ನಡೆಸಲು ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು. ಜೊತೆಗೆ ಸನ್ಮಾನಿತರ ಪಟ್ಟಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿ ಅವರಿಗೆ ಗೌರವಿಸಬೇಕು. ತಾಲೂಕಿನ ನಿವೃತ್ತ ಸೈನಿಕರನ್ನು ಸನ್ಮಾನಿಸಬೇಕು. ಇಬ್ಬರು ಹಿರಿಯ ಪತ್ರಕರ್ತರು, ವಿಜೇತ ಕ್ರೀಡಾ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು ಎಂದು ಶಾಸಕರು ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಸುರೇಂದ್ರ ಮೂರ್ತಿ, ಉಪ ತಹಸೀಲ್ದಾರ್ ಶರತ್ ಕುಮಾರ್, ಟಿಹೆಚ್ಒ ಚಂದ್ರಶೇಖರ್, ಸಿಡಿಪಿಒ ಸುರೇಂದ್ರ, ತಾಲೂಕು ವಲಯ ಅರಣ್ಯಾಧಿಕಾರಿ ಚೈತ್ರ, ಬಿಇಒ ಚಂದ್ರಶೇಖರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಫೋಟೋ 12ಮಾಗಡಿ1:

ಮಾಗಡಿ ತಾಲೂಕು ಕಚೇರಿಯಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಶಾಸಕ ಬಾಲಕೃಷ್ಣ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ