₹20 ಕೋಟಿ ವೆಚ್ಚದ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣ: ಶಾಸಕ

KannadaprabhaNewsNetwork |  
Published : Nov 12, 2026, 01:15 AM IST
ಸುರಪುರದ ಸಾರ್ವಜನಿಕ ಆಸ್ಪತ್ರೆ ಬಳಿ ₹20 ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ತಾಯಿ,ಮಕ್ಕಳ ಆಸ್ಪತ್ರೆಯ ಸ್ಥಳವನ್ನು ಶಾಸಕ ರಾಜಾ ವೇಣುಗೋಪಾಲನಾಯಕ ಅವರು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.  | Kannada Prabha

ಸಾರಾಂಶ

Construction of Mother and Child Hospital at a Cost of Crores: MLA

-ತಾಯಿ ಮಕ್ಕಳ ಆಸ್ಪತ್ರೆಯ ಸ್ಥಳವನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಪರಿಶೀಲನೆ

----

ಕನ್ನಡಪ್ರಭ ವಾರ್ತೆ ಸುರಪುರತಾಲೂಕಿನ ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳಿಗೆ ಆಧುನಿಕ ಮತ್ತು ಗುಟಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ನಗರದಲ್ಲಿ ₹20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ತಾಯಿ ಮಕ್ಕಳ ಆಸ್ಪತ್ರೆಯ ಸ್ಥಳವನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಪರಿಶೀಲನೆ ನಡೆಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಸಮೀಪದ ನೂತನ ಆಸ್ಪತ್ರೆ ನಿರ್ಮಾಣಕ್ಕಾಗಿ ಗುರುತಿಸಿರುವ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಮೂಲಸೌಕರ್ಯಗಳು, ಜಾಗದ ಸೂಕ್ತತೆ ಹಾಗೂ ಕಾಮಗಾರಿ ಆರಂಭಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಬಳಿಕ ಮಾತನಾಡಿದ ಶಾಸಕ ರಾಜಾ ವೇಣುಗೋಪಾಲನಾಯಕ, ನಗರ ಮತ್ತು ತಾಲೂಕಿನ ಸುತ್ತಮುತ್ತಲಿನ ಭಾಗದ ಗರ್ಭಿಣಿಯರು, ಬಾಣಂತಿಯರು ಮತ್ತು ನವಜಾತ ಶಿಶುಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವುದು ಅಗತ್ಯವಾಗಿದೆ.

₹20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುಸಜ್ಜಿತ ಆಸ್ಪತ್ರೆಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ತುರ್ತು ಸಂದರ್ಭಗಳಲ್ಲಿ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ತಪ್ಪಲಿದ್ದು, ಸ್ಥಳೀಯವಾಗಿಯೇ ಉತ್ತಮ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.

ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಬಡ, ಮಧ್ಯಮ ವರ್ಗದ ಜನರಿಗೆ ನೂತನ ಆಸ್ಪತ್ರೆಯಿಂದ ಅನುಕೂಲವಾಗಲಿದೆ. ಆಸ್ಪತ್ರೆ ಮಂಜೂರು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಆದಷ್ಟು ಬೇಗನೆ ಕಾಮಗಾರಿ ಆರಂಭಿಸಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಮಾತನಾಡಿ, ಪ್ರಸ್ತುತ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಕ್ಸರೇ, ಡಯಾಲಿಸಿಸ್, ಸಿ.ಟಿ. ಸ್ಕ್ಯಾನಿಂಗ್‌ ಹಾಗೂ ಇ.ಸಿ.ಜಿ ಸೇರಿದಂತೆ ಹಲವು ಉಚಿತ ಮತ್ತು ರಿಯಾಯಿತಿ ವೈದ್ಯಕೀಯ ಸೌಲಭ್ಯಗಳು ಲಭ್ಯವಿವೆ. ಜೊತೆಗೆ, ನೂತನ ₹20 ಕೋಟಿ ವೆಚ್ಚದ ತಾಯಿ, ಮಕ್ಕಳ ಆಸ್ಪತ್ರೆ 50 ಹಾಸಿಗೆಗಳ ಸಾಮರ್ಥ್ಯ ಹೊಂದಿರಲಿದ್ದು, 27 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಿ ನಿಗದಿತ ಅವಧಿಯಲ್ಲಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಒದಗಿಸಲಾಗುವುದು ಎಂದರು.

ಫೋಟೊ: 11ವೈಡಿಆರ್‌5

ಸುರಪುರದ ಸಾರ್ವಜನಿಕ ಆಸ್ಪತ್ರೆ ಬಳಿ ₹20 ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ತಾಯಿ, ಮಕ್ಕಳ ಆಸ್ಪತ್ರೆಯ ಸ್ಥಳವನ್ನು ಶಾಸಕ ರಾಜಾ ವೇಣುಗೋಪಾಲನಾಯಕ ಅವರು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀಪಾವಳಿಲೀ ರಾಕೆಟ್‌ನಂತೆ ಹಾರಿದ ವಾಯು ಮಾಲಿನ್ಯ!
ಕೌಟುಂಬಿಕ ಕೇಸಲ್ಲಿ ಕುಟುಂಬ ಸಿಲುಕಿಸುವುದು ತರವಲ್ಲ: ಕೋರ್ಟ್‌