ರಾಜ್ಯಾದ್ಯಂತ ಮುಂದಿನ 3 ವರ್ಷಗಳಲ್ಲಿ ಮೂರು ಸಾವಿರ ಕೆಪಿಎಸ್ ಶಾಲೆ : ಮಧು ಬಂಗಾರಪ್ಪ

KannadaprabhaNewsNetwork |  
Published : Aug 13, 2024, 12:57 AM ISTUpdated : Aug 13, 2024, 01:11 PM IST
Madhu bangarappa

ಸಾರಾಂಶ

ಮೂರು ಸಾವಿರ ಕೆಪಿಎಸ್ ಶಾಲೆಗಳ ನಿರ್ಮಾಣ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

 ತುಮಕೂರು : ರಾಜ್ಯಾದ್ಯಂತ ಮುಂದಿನ 3 ವರ್ಷಗಳಲ್ಲಿ ಮೂರು ಸಾವಿರ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ತುಮಕೂರಿನ ಜಿ.ಪಂ. ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಉದ್ದೇಶ ಹೊಂದಿರುವುದಾಗಿ ಹೇಳಿದರು.

ಪ್ರಸಕ್ತ ವರ್ಷದಲ್ಲೇ 500 ಕೆಪಿಎಸ್ ಶಾಲೆಗಳನ್ನು ಆರಂಭಿಲಾಗುತ್ತಿದೆ ಎಂದ ಅವರು, ಕೆಪಿಎಸ್ ಶಾಲೆಗಳನ್ನು ಆರಂಭಿಸುವುದರಿಂದ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 45 ಲಕ್ಷ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿದೆ ಎಂದರು.ಕೆಪಿಎಸ್ ಶಾಲೆಗಳನ್ನು ಸಂಪೂರ್ಣವಾಗಿ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಉತ್ತಮ ಗುಣಮಟ್ಟದ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು. ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಸಂಬಂಧ ಈಗಾಗಲೇ ಆಯಾ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪಟ್ಟಿ ಮಾಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳು ಪಟ್ಟಿ ಮಾಡುವಾಗ ಆಯಾ ಶಾಸಕರ ಅಭಿಪ್ರಾಯಗಳನ್ನು ಪಡೆಯಬೇಕು ಎಂದರು.12 ಸಾವಿರ ಶಿಕ್ಷಕರ ನೇಮಕಾತಿ:ತುಮಕೂರು: ಶಾಲಾ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಈಗಾಗಲೇ 12 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದ್ದು, ಹೆಚ್ಚುವರಿಯಾಗಿ ಇನ್ನು 12 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪ್ರಸಕ್ತ ಶೈಕ್ಷಣಿಕ ವರ್ಷಾರಂಭಕ್ಕೆ ಮುನ್ನವೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಅಲ್ಲದೆ ಅನುದಾನಿತ ಶಾಲೆಗಳಲ್ಲಿ 5 ವರ್ಷಗಳಿಂದಲೂ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1008 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32000 ಮಕ್ಕಳು ದಾಖಲಾಗುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.

ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರೊಂದಿಗೆ 1500ಕೋಟಿ ರೂ. ವೆಚ್ವದ ಯೋಜನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ನೀಡಲಾಗುವುದು. ಪೋಷಕರು ತಮ್ಮ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳಿಸಬೇಕು. ಇದರಿಂದ ಸರ್ಕಾರದ ಈ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದರಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶಾಲಾ ಶಿಕ್ಷಕರು ವಾರಕ್ಕೊಮ್ಮೆ ವಿಶೇಷ ತರಗತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!