ವಿಐಎಸ್‌ಎಲ್ ಶತಮಾನೋತ್ಸವ ವೇದಿಕೆ ನಿರ್ಮಾಣಕ್ಕೆ ಚಾಲನೆ

KannadaprabhaNewsNetwork |  
Published : Oct 30, 2023, 12:30 AM IST
ಚಿತ್ರ: ಡಿ೨೯-ಬಿಡಿವಿಟಿಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವ ನ.೪ ಮತ್ತು ೫ರಂದು ಹಿರಿಯ ಚಲನಚಿತ್ರ ನಟ, ಮಾಜಿ ಉದ್ಯೋಗಿ ಎಸ್. ದೊಡ್ಡಣ್ಣನವರ ನೇತೃತ್ವದಲ್ಲಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಹಾಕಿ ಮೈದಾನದಲ್ಲಿ ಸಿದ್ಧತೆ

ಕನ್ನಡಪ್ರಭ ವಾರ್ತೆ, ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವ ನ.4 ಮತ್ತು 5ರಂದು ಹಿರಿಯ ಚಲನಚಿತ್ರ ನಟ, ಮಾಜಿ ಉದ್ಯೋಗಿ ಎಸ್.ದೊಡ್ಡಣ್ಣ ಅವರ ನೇತೃತ್ವದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಈ ಸಂಬಂಧ ಧಾರ್ಮಿಕ ಆಚರಣೆಗಳೊಂದಿಗೆ ಭೂಮಿಪೂಜೆ ನೆರವೇರಿಸಲಾಯಿತು. ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಅಮೃತ್ ಸೇರಿದಂತೆ ಇನ್ನಿತರರು ಮಾತನಾಡಿ, ಕಾರ್ಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನ ಸೆಳೆಯಲು ಶತಮಾನೋತ್ಸವ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಮನವಿ ಮಾಡಿದರು. ಬೃಹತ್ ವೇದಿಕೆ ನಿರ್ಮಾಣದಲ್ಲಿ ಹೆಚ್ಚಿನ ಅನುಭವ ಹೊಂದಿರುವ ಹೊಸಮನೆ ಭವಾನಿ ಶಾಮಿಯಾನ ವತಿಯಿಂದ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಶತಮಾನೋತ್ಸವದಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಜನರು ಪಾಲ್ಗೊಳ್ಳುವ ವಿಶ್ವಾಸ ಸಮಿತಿ ಹೊಂದಿದೆ. ಶಾಮಿಯಾನ ಮಾಲೀಕ ಭವಾನಿ, ನಿವೃತ್ತ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರಸಭೆ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಸಮಾಜ ಸೇವಕರಾದ ಸಿದ್ದಲಿಂಗಯ್ಯ, ಕೃಷ್ಣೇಗೌಡ, ಶಂಕರ್, ಕೆಂಪಯ್ಯ, ಹನುಮಂತ ರಾವ್, ಬಸವರಾಜ್, ಡಾಕಪ್ಪ, ನಾಗರಾಜ್, ತ್ರಿವೇಣಿ, ಶೈಲೇಶ್ರೀ, ಮಹೇಶ್ವರಪ್ಪ, ವೆಂಕಟೇಶ್ ಪ್ರಸಾದ್, ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು. ನರಸಿಂಹಚಾರ್ ನಿರೂಪಿಸಿದರು. - - - -ಡಿ29ಬಿಡಿವಿಟಿ: ಭದ್ರಾವತಿ ವಿಐಎಸ್‌ಎಲ್‌ ಕಾರ್ಖಾನೆ ಶತಮಾನೋತ್ಸವ ಕಾರ್ಯಕ್ರಮಕ್ಕಾಗಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ