ನೀರಿನ ಸದ್ಬಳಕೆ ಜಲಸಂಗ್ರಹಗಾರ ನಿರ್ಮಾಣ

KannadaprabhaNewsNetwork |  
Published : Nov 04, 2025, 04:00 AM IST
ನೀರಿನ ಸದ್ಭಳಕೆಗೆ 0.8 ಟಿಎಂಸಿ ಸಾಮರ್ಥ್ಯದ ಜಲಸಂಗ್ರಹಾರ ನಿರ್ಮಾಣ: ಸಚಿವ ಡಾ.ಎಂ.ಬಿ.ಪಾಟೀಲ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ತುಬಚಿ ಬಬಲೇಶ್ವರ ಯೋಜನೆಯಡಿ ಹಂಚಿಕೆಯಾದ ನಮ್ಮ ಪಾಲಿನ ನೀರನ್ನು ಗರಿಷ್ಠ ಮಟ್ಟದಲ್ಲಿ ಸದ್ಭಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಾಬಾನಗರದ ಬಳಿ ಸರ್ಕಾರಿ ಜಮೀನಿನಲ್ಲಿ 0.8 ಟಿಎಂಸಿ ಸಾಮರ್ಥ್ಯವುಳ್ಳ ಜಲಸಂಗ್ರಹಗಾರ ನಿರ್ಮಾಣ ಮಾಡಲು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ತುಬಚಿ ಬಬಲೇಶ್ವರ ಯೋಜನೆಯಡಿ ಹಂಚಿಕೆಯಾದ ನಮ್ಮ ಪಾಲಿನ ನೀರನ್ನು ಗರಿಷ್ಠ ಮಟ್ಟದಲ್ಲಿ ಸದ್ಭಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಾಬಾನಗರದ ಬಳಿ ಸರ್ಕಾರಿ ಜಮೀನಿನಲ್ಲಿ 0.8 ಟಿಎಂಸಿ ಸಾಮರ್ಥ್ಯವುಳ್ಳ ಜಲಸಂಗ್ರಹಗಾರ ನಿರ್ಮಾಣ ಮಾಡಲು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಬಾಬಾನಗರ ಹತ್ತಿರದ ಉದ್ದೇಶಿತ ಯೋಜನಾ ಪ್ರದೇಶಕ್ಕೆ ಅಧಿಕಾರಿಗಳು, ರೈತ ಮುಖಂಡರೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಅವರು, ಜಲ ಸಂಗ್ರಹಗಾರ ನಿರ್ಮಾಣಕ್ಕೆ ಸಲಹೆ ಸೂಚನೆಗಳನ್ನು ಪಡೆದುಕೊಂಡು ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು

ಈಗಾಗಲೇ ನಾವು ಕೇವಲ ನಮ್ಮ ಪಾಲಿನ 2 ಟಿಎಂಸಿ ನೀರು ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಎಫ್‌ಐಸಿ ಆದ ನಂತರವೂ ಸಹ ಕೇವಲ 3 ಟಿಎಂಸಿ ನೀರು ಮಾತ್ರ ಬಳಕೆಯಾಗುತ್ತದೆ. ಹಾಗಾಗಿ ಉಳಿದ 2.5 ಟಿಎಂಸಿ ನೀರನ್ನು ಶೇಖರಿಸಿಕೊಂಡು ಗರಿಷ್ಠ ಮಟ್ಟದ ನೀರನ್ನು ಬಳಕೆ ಮಾಡುವ ನಿಟ್ಟಿನಲ್ಲಿ 0.8 ಟಿಎಂಸಿ ಜಲಸಂಗ್ರಹಾರ ನಿರ್ಮಾಣ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ತುಬಚಿ ಬಬಲೇಶ್ವರ ಯೋಜನೆಯಡಿ 5.5 ಟಿಎಂಸಿ ನೀರು ಇದ್ದರೂ ಸಹ ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಮಳೆಗಾಲದಲ್ಲಿ ಮಾತ್ರ ಏತನೀರಾವರಿ ಮೂಲಕ ನೀರನ್ನು ಒದಗಿಸಲಾಗುತ್ತದೆ. ಬೇಸಿಗೆಯಲ್ಲಿ ಈ ನೀರನ್ನು ಸದ್ಭಳಕೆ ಮಾಡಿಕೊಂಡು ಕೆರೆ-ಹಳ್ಳಗಳಿಗೆ ನೀರೊದಗಿಸಲು, ಉಳಿತಾಯವಾದ ನೀರನ್ನು ಗರಿಷ್ಠ ಮಟ್ಟದಲ್ಲಿ ಸದ್ಭಳಕೆ ಮಾಡುವ ನಿಟ್ಟಿನಲ್ಲಿ ಮಳೆಗಾಲದಲ್ಲಿ ನೀರನ್ನು ಸಂಗ್ರಹಗಾರದಲ್ಲಿ ಸಂಗ್ರಹಿಸಿಕೊಂಡು ಬೇಸಿಗೆ ಕಾಲದಲ್ಲಿ ನೀರು ಕೆರೆಗಳಿಗೆ ಹಳ್ಳಕ್ಕೆ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ. ಬಾಬಾನಗರದ ಹತ್ತಿರ 500 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಜಲ ಸಂಗ್ರಹಗಾರ ನಿರ್ಮಾಣಕ್ಕೆ ಯಾವುದೇ ಭೂಸ್ವಾಧೀನಕ್ಕೆ ಹಣ ವೆಚ್ಚ ಮಾಡುವ ಅವಶ್ಯಕತೆ ಇಲ್ಲ. ತಗ್ಗು ಪ್ರದೇಶ, ನೈಸರ್ಗಿಕವಾಗಿ ಇರುವ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ನೀರಿನ ಸದ್ಭಳಕೆ ಮಾಡಿಕೊಳ್ಳಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮನದಟ್ಟಣೆ ಮಾಡಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ವೃತ್ತದ ಅಧೀಕ್ಷಕ ಅಭಿಯಂತರ ಬಿ.ಆರ್‌.ರಾಠೋಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಂಬಣ್ಣ, ನೀರಾವರಿ ತಜ್ಞ ಡಾ.ಹುಗ್ಗಿ ಸೇರಿದಂತೆ ವಿವಿಧ ಅಧಿಕಾರಿಗಳು, ರೈತ ಮುಖಂಡರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.ಕೋಟ್‌ಕಳೆದ 2013-18ರ ಅವಧಿಯಲ್ಲಿ ತುಬಚಿ ಬಬಲೇಶ್ವರ ಯೋಜನೆಗೆ ಈ ಭಾಗದ ಅತಿ ಎತ್ತರದ ಪ್ರದೇಶವಾದ ಕನಮಡಿ, ಬಾಬಾನಗರ, ಬಿಜ್ಜರಗಿ, ತಿಕೋಟಾ ತಾಲೂಕು ಹಾಗೂ ಸಾವಳಗಿ ತಾಲೂಕಿನ 1.30 ಲಕ್ಷ ಎಕರೆ ಸುಮಾರು 6.3 ಟಿಎಂಸಿ ನೀರಿನಲ್ಲಿ 5.5 ತಿಕೋಟಾ ಹೋಬಳಿಗೆ ಮತ್ತು ಸಾವಳಗಿ ತಾಲೂಕಿಗೆ 0.8 ಟಿಎಂಸಿ ನೀರೊದಗಿಸಲು ₹ 3600 ಕೊಟಿ ವೆಚ್ಚ ಮಾಡಲಾಗಿದೆ. ಈಗಾಗಲೇ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರು ಸಂತಸದಲ್ಲಿದ್ದಾರೆ. ಎಫ್‌ಐಸಿ ಯೋಜನೆ ಪೂರ್ಣಗೊಂಡು ಕೆರೆಗಳಿಗೆ ನೀರು ಒದಗಿಸಲಾಗುತ್ತಿದೆ. ಟೆಂಡರ್ ಆಗಿ ಕಾಮಗಾರಿ ನಡೆಯುತ್ತಿದ್ದು, ಮುಂದಿನ 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ರೈತರ ಹೊಲಗಳಿಗೆ ನೀರು ಹರಿಸಲಾಗುವುದು.ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ