ರಾಜ್ಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಾಮಗಾರಿ, ರೈತರ ಪ್ರತಿಭಟನೆ

KannadaprabhaNewsNetwork |  
Published : Jul 19, 2026, 03:15 AM IST
ಗದಗ ದಂಡಿನ ದುರ್ಗಾದೇವಿ ದೇವಸ್ಥಾನದ ಬಳಿ ರೈತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಹನಿ ನೀರಾವರಿ ಯೋಜನೆಯಡಿ ರಾಜ್ಯ ಹೆದ್ದಾರಿ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ದಂಡಿನ ಶ್ರೀ ದುರ್ಗಾದೇವಿ ದೇವಸ್ಥಾನದ ಭಕ್ತರು ದಂಡಿನ ದುರ್ಗಾದೇವಿ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿದರು.

ಗದಗ: ಹನಿ ನೀರಾವರಿ ಯೋಜನೆಯಡಿ ರಾಜ್ಯ ಹೆದ್ದಾರಿ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ಹಾಗೂ ನರಸಾಪುರ ಮತ್ತು ನಾಗಸಮುದ್ರ ಸರಹದ್ದಿನಲ್ಲಿ ಕೈಗೊಂಡಿರುವ 220 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯ ಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ), ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ದಂಡಿನ ಶ್ರೀ ದುರ್ಗಾದೇವಿ ದೇವಸ್ಥಾನದ ಭಕ್ತರು ಜಂಟಿಯಾಗಿ ದಂಡಿನ ದುರ್ಗಾದೇವಿ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಎಂ.ಪಿ. ಪರ್ವತಗೌಡ್ರ, ಕೇಂದ್ರ ಸರ್ಕಾರದ ಇಂಡಿಯನ್ ರೋಡ್ ಕಾಂಗ್ರೆಸ್ ವಿಶೇಷ ಪ್ರಕಟಣೆ 15ರ ಪ್ರಕಾರ ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ ಎರಡೂ ಕಡೆ 40 ಮೀಟರ್‌ ವರೆಗೆ ನಿಷೇಧಿತ ಪ್ರದೇಶವಾಗಿರುತ್ತದೆ. ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದನ್ನು ಗಾಳಿಗೆ ತೂರಿ ಕಾಮಗಾರಿಗೆ ಅನುಮತಿ ನೀಡಿದ್ದಾರೆ. ಕಾರವಾರ, ಕೈಗಾ, ಇಳಕಲ್ (ಎಸ್ಎಚ್-06) ರಸ್ತೆಗೆ ಹೊಂದಿಕೊಂಡು ಕ.ನೀ.ನಿ.ನಿ. ಸಿಂಗಟಾಲೂರು ಏತ ನೀರಾವರಿ ನಿಗಮದ ಅಧಿಕಾರಿಗಳು ಕಾನೂನು ಬಾಹಿರವಾಗಿ ದೊಡ್ಡ ಕಂದಕಗಳನ್ನು ತೆಗೆದು ಪೈಪ್‌ಲೈನ್ ಅಳವಡಿಸುತ್ತಿದ್ದಾರೆ ಎಂದು ಆರೋಪಿಸಿದರು.

200 ವರ್ಷಗಳ ಇತಿಹಾಸವಿರುವ ದಂಡಿನ ದುರ್ಗಾದೇವಿ ದೇವಸ್ಥಾನದ ಡಾಂಬರ್ ರಸ್ತೆಯ ಮಧ್ಯೆ 8 ಅಡಿ ಅಗಲ ಹಾಗೂ 20 ಅಡಿಗೂ ಹೆಚ್ಚು ಆಳದ ಗುಂಡಿ ತೋಡುತ್ತಿರುವುದರಿಂದ ದೇವಸ್ಥಾನದ ಕಟ್ಟಡಕ್ಕೆ ಹಾಗೂ ಆವರಣದಲ್ಲಿರುವ 150 ವರ್ಷ ಹಳೆಯದಾದ ಬೇವಿನ ಮರಕ್ಕೆ ಧಕ್ಕೆಯಾಗಲಿದೆ. ಆದ್ದರಿಂದ ದೇವಸ್ಥಾನದಿಂದ ಕನಿಷ್ಠ 300 ಮೀಟರ್ ದೂರದಲ್ಲಿ ಕಾಮಗಾರಿ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಭೂಸ್ವಾಧೀನಕ್ಕೆ ರೈತರ ವಿರೋಧ: ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸಯ್ಯ ಗುಡ್ಡಿಮಠ ಮಾತನಾಡಿ, ಬೆಟಗೇರಿ ಹೊರವಲಯದ ನರಸಾಪುರ ಮತ್ತು ನಾಗಸಮುದ್ರದ 220 ಎಕರೆ ಫಲವತ್ತಾದ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.

ಹಿಂದೂ ಮುಖಂಡ ರಾಜು ಖಾನಪ್ಪನವರ ಮಾತನಾಡಿ, ಭಕ್ತರ ಹಾಗೂ ರೈತರ ಭಾವನೆಗಳಿಗೆ ಧಕ್ಕೆ ತಂದರೆ ಹೋರಾಟ ನಡೆಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ ಸುಂಕದ, ಕರವೇ ಜಿಲ್ಲಾ ಸಂಚಾಲಕ ಸುರೇಶ ಮುಳಗುಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಹಿರಿಯರಾದ ಯಮನೂರಸಾಬ್ ನದಾಫ, ದಲಿತ ಮುಖಂಡ ಯಲ್ಲಪ್ಪ ದೊಡ್ಡಮನಿ, ಶರಣಪ್ಪ ಅಡನೂರ, ನಂದಪ್ಪ ಹಳ್ಳಿಕೇರಿ, ಶರಣಪ್ಪ ಹೊನ್ನಪ್ಪನವರ, ಮಂಜುನಾಥ ಭಜಂತ್ರಿ, ಹೇಮರಡ್ಡಿ ಸೋಮರಡ್ಡಿ, ಅಪ್ಪಣ್ಣ ಕಾಳೆ, ಅಲ್ಲದೇ ಹರಣಶಿಕಾರಿ (ಪಾರ್ಥಿ) ಸಮಾಜದ ಜಿಲ್ಲಾಧ್ಯಕ್ಷ ಚಂದ್ರು ಚೌಹಾಣ, ಯಲ್ಲಪ್ಪ, ರಾಜು, ರವಿ, ರಮೇಶ, ಗುಂಡಪ್ಪ ಚೌಹಾಣ, ರಾಜು ದೊಡ್ಡಮನಿ, ಬಸವರಾಜ ಚೌಹಾಣ, ಚಂದ್ರು ಕಟ್ಟಿಮನಿ, ಶಿವಾಜಿ ಚೌಹಾಣ, ಬೂದೀಶ, ತಾರಪ್ಪ ಕಾಳೆ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಥಳೀಯ ಸಂಸ್ಥೆ ಚುನಾವಣೆಗೆ ಜೆಡಿಎಸ್ ಪೂರ್ವಸಿದ್ಧತೆ
ಅನಧೀಕೃತ ಶಾಲೆಗೆ ನೋಟಿಸ್‌!