ಆರೋಗ್ಯ ಉಪಕೇಂದ್ರದ ಕಟ್ಟಡ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Sep 18, 2026, 01:45 AM IST
ರಾಮನಾಥಪುರ ಹೋಬಳಿ ಕಾಳೆನಹಳ್ಳಿ ಗ್ರಾಮದಲ್ಲಿ ₹65 ಲಕ್ಷ ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ  ಶಾಸಕರು ಎ. ಮಂಜು ಗುದ್ದಲಿ ಪೂಜೆ ನೇರವೇರಿಸಿದರು. | Kannada Prabha

ಸಾರಾಂಶ

ಕಾಳೆನಹಳ್ಳಿ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆರೋಗ್ಯ ಉಪಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರಾದ ಎ. ಮಂಜು ಅವರುಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಆರೋಗ್ಯ ಉಪಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿರುವುದರಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು. ಈ ಆರೋಗ್ಯ ಉಪಕೇಂದ್ರದಿಂದ ಗ್ರಾಮದ ಜನರಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ದೊರೆಯಲಿವೆ. ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟವನ್ನು ಕಾಪಾಡಿಕೊಂಡು ಕಾಮಗಾರಿ ನಿರ್ವಹಿಸುವಂತೆ ಸೂಚಿಸಿದರು.

ರಾಮನಾಥಪುರ: ಹೋಬಳಿಯ ಕಾಳೆನಹಳ್ಳಿ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆರೋಗ್ಯ ಉಪಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರಾದ ಎ. ಮಂಜು ಅವರುಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಆರೋಗ್ಯ ಉಪಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿರುವುದರಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು. ಈ ಆರೋಗ್ಯ ಉಪಕೇಂದ್ರದಿಂದ ಗ್ರಾಮದ ಜನರಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ದೊರೆಯಲಿವೆ. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟವನ್ನು ಕಾಪಾಡಿಕೊಂಡು ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಎ. ಮಂಜು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮದ ಹಿರಿಯರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು ಉದ್ಯೋಗ ನೀಡುವ ಶಕ್ತಿಯಾಗಲಿ: ಜೋಶಿ
40 ವರ್ಷ, 3 ಜ್ಯೋತಿರ್ಲಿಂಗ, 10 ಸಾವಿರ ಭಕ್ತರು!