ಕಟ್ಟಡ ಕಾರ್ಮಿಕರು ಸ್ವಾವಲಂಬಿ ಬದುಕು ಸಾಗಿಸಬೇಕು: ನಯನಾ ಮೋಟಮ್ಮ

KannadaprabhaNewsNetwork |  
Published : Nov 17, 2024, 01:16 AM IST
ಮೂಡಿಗೆರೆ ತಾ.ಪಂ. ಸಭಾಂಗಣದಲ್ಲಿ ಶಾಸಕಿ ನಯನಾ ಮೋಟಮ್ಮ ಅವರು ಕಟ್ಟಡ ಕಾರ್ಮಿಕರಿಗೆ ಗಾರೆ, ವೆಲ್ಡಿಂಗ್, ಎಲೆಕ್ಟ್ರಿಕಲ್ ಸಲಕರಣೆಗಳನ್ನು ವಿತರಿಸಿದರು. ತಾ.ಪಂ. ಇಒ ದಯಾವತಿ,  ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಭಾಕರ್, ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಅಣ್ಣೇಗೌಡ ಇದ್ದರು. | Kannada Prabha

ಸಾರಾಂಶ

ಮೂಡಿಗೆರೆ, ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಮಕ್ಕಳ ವಿದ್ಯಾಭ್ಯಾಸ, ಮದುವೆ, ವಿಮೆ ಸೇರಿದಂತೆ ಅನೇಕ ಸವಲತ್ತುಗಳನ್ನು ಕಾರ್ಮಿಕ ಇಲಾಖೆ ಮುಖಾಂತರ ನೀಡುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಂಡು ಜೀವನದಲ್ಲಿ ಸ್ವಾವಲಂಬಿ ಬದುಕು ಸಾಗಿಸಬೇಕೆಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ತಾಪಂ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಏರ್ಪಡಿಸಿದ್ದ ಸಲಕರಣೆಗಳ ಕಿಟ್‌ ವಿತರಣೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಮೂಡಿಗೆರೆ

ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಮಕ್ಕಳ ವಿದ್ಯಾಭ್ಯಾಸ, ಮದುವೆ, ವಿಮೆ ಸೇರಿದಂತೆ ಅನೇಕ ಸವಲತ್ತುಗಳನ್ನು ಕಾರ್ಮಿಕ ಇಲಾಖೆ ಮುಖಾಂತರ ನೀಡುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಂಡು ಜೀವನದಲ್ಲಿ ಸ್ವಾವಲಂಬಿ ಬದುಕು ಸಾಗಿಸಬೇಕೆಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ತಾಪಂ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಏರ್ಪಡಿಸಿದ್ದ ಸಲಕರಣೆಗಳ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಗಾರೆ, ವೆಲ್ಡಿಂಗ್ ಹಾಗೂ ಎಲೆಕ್ಟ್ರಿಕಲ್ ಸಲಕರಣೆ ವಿತರಿಸಿ ಮಾತನಾಡಿದರು. ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸಾಕಷ್ಟು ಸಲವತ್ತುಗಳು ಸಿಗುತ್ತಿವೆ. ಗಾರೆ ಕಿಟ್‌ಗೆ 109, ವೆಲ್ಡಿಂಗ್‌ಗೆ 18, ಎಲೆಕ್ಟ್ರಿಕಲ್ ಕಿಟ್‌ಗೆ 15 ಮಂದಿ ಫಲಾನುಭವಿಗಳು ಅರ್ಜಿ ಸಲ್ಲಿಸಿ ಕಿಟ್ ಪಡೆದಿದ್ದಾರೆ. ಅಲ್ಲದೇ ಈ ವರ್ಷ 22 ಫಲಾನುಭವಿಗಳು ಮದುವೆಗೆ ಧನ ಸಹಾಯ ಪಡೆದಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಈ ಸವಲತ್ತುಗಳನ್ನು ಪಡೆದುಕೊಳ್ಳುವಂತಾಗಬೇಕೆಂದು ಹೇಳಿದರು.

ತಾಲೂಕಿನಲ್ಲಿ ಕಟ್ಟಡ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಸರ್ಕಾರ ಸಿಗುವ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸ ಬೇಕು. ಸವಲತ್ತು ಪಡೆಯಲು ಎಲ್ಲಾ ಕಾರ್ಮಿಕರು ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ಪಡೆದು ನೋಂದಣಿ ಹಾಗೂ ನಿರಂತರವಾಗಿ ನವೀಕರಣಗೊಳಿಸಿಕೊಳ್ಳಬೇಕು. ಮಹಿಳೆಯರು ಕೂಡ ಇಂತಹ ಸವಲತ್ತು ಪಡೆದು ಕುಟುಂಬದಲ್ಲಿ ಹೆಚ್ಚು ಆದಾಯ ಗಳಿಸಬೇಕು. ಆಗ ಸರ್ಕಾರ ಉದ್ದೇಶಗಳು, ಜನಪರ ಯೋಜನೆಗಳಿಗೆ ಸಾರ್ಥಕತೆ ಸಿಗುವಂತಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಹಕ ಅಧಿಕಾರಿ ದಯಾವತಿ, ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಭಾಕರ್, ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಅಣ್ಣೇಗೌಡ ಉಪಸ್ಥಿತರಿದ್ದರು.

16 ಕೆಸಿಕೆಎಂ 3

ಮೂಡಿಗೆರೆ ತಾ.ಪಂ. ಸಭಾಂಗಣದಲ್ಲಿ ಶಾಸಕಿ ನಯನಾ ಮೋಟಮ್ಮ ಅವರು ಕಟ್ಟಡ ಕಾರ್ಮಿಕರಿಗೆ ಗಾರೆ, ವೆಲ್ಡಿಂಗ್, ಎಲೆಕ್ಟ್ರಿಕಲ್ ಸಲಕರಣೆಗಳನ್ನು ವಿತರಿಸಿದರು. ತಾ.ಪಂ. ಇಒ ದಯಾವತಿ, ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಭಾಕರ್, ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಅಣ್ಣೇಗೌಡ ಇದ್ದರು.

PREV

Recommended Stories

ಧರ್ಮಸ್ಥಳ ಪ್ರಕರಣ ಮುಚ್ಚಿ ಹಾಕುವ ಯತ್ನ
ತಾಲೂಕು ಆಡಳಿತದ ಬೇಜವಾಬ್ದಾರಿಯಿಂದ ನೀರು ಕಲುಷಿತ