ಆನೆಕಾಡು ಬಳಿ ಅಪಘಾತ ಹೆಚ್ಚಳ ತಡೆಗೆ ಸಮಾಲೋಚನೆ

KannadaprabhaNewsNetwork |  
Published : Sep 30, 2026, 02:30 AM IST
 | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಕುಶಾಲನಗರ ಮಡಿಕೇರಿ ರಸ್ತೆಯ ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯು ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.

ಕುಶಾಲನಗರ : ಇತ್ತೀಚಿನ ದಿನಗಳಲ್ಲಿ ಕುಶಾಲನಗರ ಮಡಿಕೇರಿ ರಸ್ತೆಯ ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯು ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.

ಡಾ.ಮಂತರ್ ಗೌಡ ಮಾತನಾಡಿ, ಆನೆಕಾಡು ಬಳಿ ನಿರಂತರ ಅಪಘಾತಗಳ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸದಿರುವುದು ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಆನೆಕಾಡು ಬಳಿ ಸಾವಿಗೀಡಾಗಿದ್ದಾರೆ‌. ಅಪಘಾತದಿಂದ ತೀವ್ರ ಗಾಯಕ್ಕೆ ಒಳಗಾಗುತ್ತಿದ್ದಾರೆ. ಇನ್ನು ಮುಂದೆ ಪ್ರಾಣಹಾನಿ ಸಂಭವಿಸಿದರೆ ಅಧಿಕಾರಿಗಳೇ ನೇರಹೊಣೆ ಆಗಬೇಕಾಗುತ್ತದೆ ಎಂದರು. ಕೂಡಲೇ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಪಘಾತದಿಂದ ಮೃತಪಟ್ಟವರ ಮತ್ತು ಗಾಯಾಳುಗಳ ಮನೆಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡುವಂತೆ ಶಾಸಕರು ಸೂಚಿಸಿದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ ಪಿ ಶಶಿಧರ್. ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉಪ ವಿಭಾಗಾಧಿಕಾರಿ ಅಧಿಕಾರಿ ಸಂಜೀವ್ ಕುಮಾರ್, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿಯುವ ನೀರಿಗೆ ಅಭಾವ ಆಗದಿರಲಿ: ಜಿಲ್ಲಾಧಿಕಾರಿ ಸೂಚನೆ
ಪರೀಕ್ಷಾ ಪ್ರಾಧಿಕಾರ ನಿಯಮದಂತೆ ಪರೀಕ್ಷೆ ನಡೆಸಿ: ಡಿಸಿ