ಕನ್ನಡಪ್ರಭ ವಾರ್ತೆ, ತರೀಕೆರೆ
ತರೀಕೆರೆ ಪುರಸಬೆ ಸಭಾಂಗಣದಲ್ಲಿ ಅಧ್ಯಕ್ಷ ಪರಮೇಶ್ ಅಧ್ಯಕ್ಷತೆಯಲ್ಲಿ ಸದಸ್ಯರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು ಮಾತನಾಡಿ ತರೀಕೆರೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಓಡಾಡಲು ಭಯ ಪಡುತ್ತಿದ್ದಾರೆ. ಕೂಡಲೇ ಇದರ ಬಗ್ಗೆ ಕ್ರ ಮ ಕೈಗೊಳ್ಳಬೇಕು ಎಂದು ಹೇಳಿದರು.
ಎಂಬಿಬಿಎಸ್ ಮತ್ತು ಬಿ.ಇ.ವಿದ್ಯಾರ್ಥಿಗಳಿಗೆ ನೀಡುತ್ತಿರುವ ಲ್ಯಾಪ್ ಟ್ಯಾಪ್ ನ್ನು ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು ಜ. 10 ರಂದು ನಿಗದಿಯಾಗಿದ್ದ ವಿಶೇಷ ಸಭೆಯನ್ನು ಏಕೆ ಮುಂದೂಡಲಾಯಿತು ಎಂದು ಪ್ರಶ್ನಿಸಿದರು.ಸದಸ್ಯ ಟಿ.ಜಿ.ಲೋಕೇಶ್ ಮಾತನಾಡಿ ಬೀದಿ ನಾಯಿಗಳನ್ನು ನಿಯಂತ್ರಿಸುವುದು ಸ್ವಚ್ಛತೆಯ ಒಂದು ಭಾಗ. ಕೂಡಲೇ ಬೀದಿ ನಾಯಿಗಳ ಕಾಟ ನಿಯಂತ್ರಣಕ್ಕೆ ಪುರಸಬೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮಾತನಾಡಿ ಶೌಚಾಲಯ ವ್ಯವಸ್ಥೆ ಇಲ್ಲದ ಕಡೆ ಖಂಡಿತ ಶೌಚಾಲಯ ವ್ಯವಸ್ಥೆ ಮಾಡ ಲಾಗುವುದು, ಎಲ್ಲ ವಸತಿ ಗೃಹಗಳಲ್ಲಿ ಸ್ವಚ್ಛತೆ ಕಾಪಾಡಿ ದುರಸ್ತಿ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.
ತರೀಕೆರೆಯಲ್ಲಿ ಪುರಸಭಾ ಕಾರ್ಯಾಲಯದಿಂದ ಪುರಸಭೆ ಅಧ್ಯಕ್ಷ ಪರಮೇಶ್ ಅಧ್ಯಕ್ಷತೆಯಲ್ಲಿ ಪುರಸಭೆ ಸದಸ್ಯರ ವಿಶೇಷ ಸಭೆ ಏರ್ಪಡಿಸಲಾಗಿತ್ತು. ಮುಖ್ಯಾಧಿಕಾರಿ ಪ್ರಶಾಂತ್ ಎಚ್.ಇದ್ದಾರೆ.