ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗುತ್ತಿರುವ ಮನೆ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು, ಕಾಮಗಾರಿ ಮುಂದುವರಿಸಲು ಅವಕಾಶ ನೀಡಿರುವ ಪಿಡಿಒ ಅವರ ತಲೆದಂಡವಾಗುವ ಸಾಧ್ಯತೆ ಎದುರಾಗಿದೆ.
ದೂರು ನೀಡಿದ್ದರೂ ಕ್ರಮಕೈಗೊಳ್ಳದ ಅಧಿಕಾರಿಗಳ ನಡೆಯನ್ನು ಗಂಭೀರವಾಗಿ ಪರಿಗಣಿಸಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಆರ್. ನಟರಾಜ್ ಅನಧಿಕೃತ ನಿರ್ಮಾಣಕ್ಕೆ ಡಿ. 4ರಂದು ತಡೆಯಾಜ್ಞೆ ನೀಡಿದ್ದಾರೆ. ಪಿಡಿಒ ಪರಿಶೀಲನೆ ನಡೆಸಿ ಅನಧಿಕೃತ ಕಾಮಗಾರಿಯನ್ನು ಪೊಲೀಸರ ನೆರವಿನಿಂದ ತಕ್ಷಣ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.ರವೀಂದ್ರ ಶೆಟ್ಟಿ ಅವರು ಈ ಹಿಂದೆ ಸದ್ರಿ ಪ್ರದೇಶದ ಬಳಿಯಲ್ಲಿ ಕಾರ‍್ಯನಿರ್ವಹಿಸುತ್ತಿದ್ದ ಕೋರೆಯೊಂದರ ಕಾರ್ಮಿಕರ ಶೆಡ್ಡಿನ ವಿದ್ಯುತ್ ಸಂಪರ್ಕವನ್ನು ಈ ಅನಧಿಕೃತ ಮನೆಗೆ ವರ್ಗಾಯಿಸಿದ ಆರೋಪವನ್ನೂ ಎದುರಿಸುತ್ತಿದ್ದಾರೆ. ಹೈಕೋರ್ಟ್ ತಡೆಯಾಜ್ಞೆ ನೀಡಿದ ಮೇಲೂ ತರಾತುರಿಯಿಂದ ಕಾಮಗಾರಿ ಪೂರ್ಣಗೊಳಿಸಿ ಮನೆಯಲ್ಲಿ ವಾಸಿಸಲು ಪ್ರಯತ್ನಿಸುತ್ತಿರುವುದು ನ್ಯಾಯಾಂಗ ನಿಂದನೆಯಾಗಿದೆ.
ಲೋಕಾಯುಕ್ತ, ಜಿಲ್ಲಾಧಿಕಾರಿಗಳಿಗೂ ದೂರುಇದೀಗ ಇರುವೈಲಿಗೆ ಹೊಸದಾಗಿ ನೇಮಕಗೊಂಡಿರುವ ಪಿಡಿಒ ನೋಟಿಸ್ ನೀಡಿದ್ದರೂ, ಪ್ರತಿವಾದಿ ರವೀಂದ್ರ ಶೆಟ್ಟಿ ಅವರು ತುರಾತುರಿಯಿಂದ ಕಾಮಗಾರಿ ಮುಂದುವರಿಸಲು ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ದೂರುದಾರರು ಲೋಕಾಯುಕ್ತ ಮತ್ತು ದ.ಕ. ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದ್ದಾರೆ. ಕಾಮಗಾರಿ ಮುಂದುವರಿಯುತ್ತಿರುವ ಬಗ್ಗೆ ಹೈಕೋರ್ಟಿಗೆ ಮಾಹಿತಿ ನೀಡಲಾಗುತ್ತಿದ್ದು, ಇದರಿಂದ ಇರುವೈಲು ಪಿಡಿಒ ಅವರ ತಲೆದಂಡವಾಗುವ ಸಾಧ್ಯತೆಯಿದೆ.