ಖಾನಾಪುರದಲ್ಲಿ ಮುಂದುವರಿದ ಮಳೆ ಆವಾಂತರ

KannadaprabhaNewsNetwork |  
Published : Jul 22, 2024, 01:16 AM IST
ಖಾನಾಪುರ ತಾಲೂಕಿನ ಭೀಮಗಡ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿರುವ ಕಾರಣ ಹೆಮ್ಮಡಗಾ ಮೆಂಡಿಲ್ ಮಾರ್ಗದ ರಸ್ತೆ ಮತ್ತು ಸೇತುವೆಯ ಮೇಲೆ ನೀರು ಹರಿಯುತ್ತಿದೆ. | Kannada Prabha

ಸಾರಾಂಶ

ಖಾನಾಪುರ ತಾಲೂಕಿನಾದ್ಯಂತ ವಾರದಿಂದ ಸುರಿಯುತ್ತಿರುವ ಮಳೆಯ ಅಬ್ಬರ ಭಾನುವಾರವೂ ಮುಂದುವರೆದಿದ್ದು, ಅವಾಂತರ ಸೃಷ್ಟಿಸಿದೆ.

ಕನ್ನಡಪ್ರಭ ವಾರ್ತೆ ಖಾನಾಪುರ

ತಾಲೂಕಿನಾದ್ಯಂತ ವಾರದಿಂದ ಸುರಿಯುತ್ತಿರುವ ಮಳೆಯ ಅಬ್ಬರ ಭಾನುವಾರವೂ ಮುಂದುವರೆದಿದ್ದು, ಅವಾಂತರ ಸೃಷ್ಟಿಸಿದೆ.

ಭಂಡೂರಿ ಹಳ್ಳದ ಪ್ರವಾಹದಿಂದ ದೇಗಾಂವ-ಹೆಮ್ಮಡಗಾ ಮತ್ತು ಪಾಲಿ-ಮೆಂಡಿಲ್ ಗ್ರಾಮಗಳ ನಡುವಿನ ರಸ್ತೆ ಮತ್ತು ಸೇತುವೆಯ ಮೇಲೆ ನೀರು ಹರಿಯುತ್ತಿರುವುದರಿಂದ ದೇಗಾಂವ ಮತ್ತು ಮೆಂಡಿಲ್ ಮುಖ್ಯ ವಾಹಿನಿಯಿಂದ ಸಂಪರ್ಕ ಕಳೆದುಕೊಂಡಿದ್ದರೆ, ಮಹದಾಯಿ ನದಿಯಲ್ಲಿ ಪ್ರವಾಹಕ್ಕೆ ನೇರಸಾ-ಗವ್ವಾಳಿ, ಅಮಗಾಂವ-ಚಿಕಲೆ ಮತ್ತು ಘೋಸೆ ಗ್ರಾಮಗಳು ನಡುಗಡ್ಡೆಗಳಂತಾಗಿವೆ.

ತಾಲೂಕಿನ ಚಾಪಗಾಂವ ಗ್ರಾಮದ ಯಲ್ಲಪ್ಪ ಮಾದಾರ ಅವರ ಮನೆಯ ಗೋಡೆ ಭಾನುವಾರ ಕುಸಿದಿದೆ. ಗವ್ವಾಳಿ, ಅಮಗಾಂವ, ಕೃಷ್ಣಾಪುರ, ಹುಳಂದ, ಸಡಾ, ದೇಗಾಂವ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳ ಮೇಲೆ ನೀರಿನ ಹರಿವು ಮುಂದುವರೆದಿದೆ.

ಸಿಂಧನೂರು-ಹೆಮ್ಮಡಗಾ ಹೆದ್ದಾರಿಯ ಅಲಾತ್ರಿ ಹಳ್ಳದ ಸೇತುವೆಯ ಮೇಲೆ ನೀರಿನ ಹರಿವು ಕ್ಷೀಣಿಸಿದ್ದರಿಂದ ಭಾನುವಾರ ಬೆಳಗ್ಗೆಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ಆರಂಭವಾಗಿದೆ. ಲೋಂಡಾ-ವರ್ಕಡ ಮತ್ತು ಸಾತನಾಳಿ-ಮಾಚಾಳಿ ಮಾರ್ಗ ಮಧ್ಯದ ಹಳ್ಳಗಳ ಸೇತುವೆಗಳ ಮೇಲೆ ನೀರಿನ ಹರಿವು ಮುಂದುವರೆದಿದೆ. ಶಾಸಕ ವಿಠ್ಠಲ ಹಲಗೇಕರ ಅವರ ಸೂಚನೆ ಮೇರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ