ಹೊಸಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.ಇಲಾಖೆಯಿಂದ ಅಭಿವೃದ್ದಿ ಪಡಿಸಿರುವ ಸುಮಾರು 21ಕ್ಕೂ ಅಧಿಕ ಮೊಬೈಲ್-ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದಾರೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್, ಅದಕ್ಕೆ ಅವಶ್ಯಕವಾಗಿರುವ ಇಂಟರ್ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ನೋವು ಅನುಭವಿಸುತ್ತಿದ್ದಾರೆ ಎಂದು ದೂರಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಕಲ್ಪಿಸಬೇಕು. ಗುಣಮಟ್ಟದ ಪೀಠೋಪಕರಣಗಳು, ಅಂತರ್ಜಾಲ ವ್ಯವಸ್ಥೆಯನ್ನು ಒದಗಿಸಬೇಕು. ಸಂಯೋಜನೆ, ಇ-ಆಫೀಸ್, ಗರುಡ, ಭೂಮಿ, ನವೋದಯ, ದಿಶಾಂಕ್ ಮತ್ತಿತರ ತಂತ್ರಾಂಶಗಳ ನಿರ್ವಹಣೆಗೆ ಹೆಚ್ಚಿನ ಡೇಟಾ ಸಾಮರ್ಥ್ಯದ ಸ್ಮಾರ್ಟ್ ಫೋನ್‌ಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಗುರುಬಸವರಾಜ ಸಿ., ಉಪಾಧ್ಯಕ್ಷ ವೀರೇಶ್, ಖಜಾಂಚಿ ಬಸವರಾಜ, ತಾಲೂಕು ಅಧ್ಯಕ್ಷರಾದ ರವಿಚಂದ್ರ ಗೊಗ್ಗಿ,ಮಲ್ಲೇಶ್ ನಾಯ್ಕ, ಶಶಿಕುಮಾರ್, ಜ್ಯೋತಿ ಬಾಯಿ, ಮರುಳಸಿದ್ದಪ್ಪ, ದೇವೇಂದ್ರಪ್ಪ ಮತ್ತು ಗ್ರಾಮ ಸಹಾಯಕರ ಜಿಲ್ಲಾ ಸಂಘದ ಅಧ್ಯಕ್ಷ ಟಿ. ಫಕ್ಕೀರಪ್ಪ ಮತ್ತು ಪದಾಧಿಕಾರಿಗಳು, ಎಲ್ಲಾ ಹಂತದ ಗ್ರಾಮ ಆಡಳಿತ ಅಧಿಕಾರಿಗಳ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ನಗರದ ಜಿಲ್ಲಾಧಿಕಾರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.