ಗೋಕಾಕ ಜಿಲ್ಲೆ ಘೋಷಣೆಯಾಗೋವರೆಗೆ ನಿರಂತರ ಹೋರಾಟ: ಮುರುಘರಾಜೇಂದ್ರ ಸ್ವಾಮೀಜಿ

KannadaprabhaNewsNetwork |  
Published : Nov 13, 2024, 12:00 AM IST
ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ತಹಸೀಲ್ದಾ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಮಂಗಳವಾರ ನಗರದಲ್ಲಿ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ, ವಕೀಲರ ಸಂಘ ಹಾಗೂ ನಗರದ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

4 ದಶಕಗಳಿಂದ ಗೋಕಾಕ ಜಿಲ್ಲೆ ಮಾಡಲು ನಿರಂತರ ಹೋರಾಟ ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಮನವರಿಕೆ ಮಾಡಲಾಗಿದ್ದು, ಈವರೆಗೆ ಈಡೇರಿಲ್ಲ. ಮುಂಬರುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಸರ್ಕಾರದ ಮೇಲೆ ತಂದು ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋಕಾಕ ನೂತನ ಜಿಲ್ಲಾ ಕೇಂದ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.

ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ಗೋಕಾಕ ಜಿಲ್ಲಾ ಹೋರಾಟಕ್ಕೆ ಜಾರಕಿಹೊಳಿ ಸಹೋದರರ ಸಂಪೂರ್ಣ ಬೆಂಬಲವಿದ್ದು, ಸದನದ ಒಳಗೆ ಮತ್ತು ಹೊರಗೆ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಅವರು ಆಯಾ ಸರ್ಕಾರಗಳ ಮುಖ್ಯಮಂತ್ರಿಯನ್ನು ಒತ್ತಾಯ ಮಾಡುತ್ತಾ ಬಂದಿದ್ದಾರೆ. ಮುಂದೆಯೂ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲಾಗುವುದು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ ಮಾತನಾಡಿ, ಅಭಿವೃದ್ಧಿ ಮತ್ತು ಜನಸಂಖ್ಯೆ ಆಧಾರದ ಮೇಲೆ ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಗೋಕಾಕ ಹೊಸ ಜಿಲ್ಲೆ ಮಾಡಬೇಕು. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಆದಷ್ಟು ಬೇಗ ಬೆಳಗಾವಿ ಜಿಲ್ಲೆ ವಿಭಜನೆ ಮಾಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಮಾತನಾಡಿ, ಗೋಕಾಕ ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಇದು ಸಾಂಕೇತಿಕ ಹೋರಾಟವಾಗಿದ್ದು , ಮುಂದಿನ ವಾರದಿಂದ ಸಸತವಾಗಿ ಹೋರಾಟ ಕೈಗೊಂಡು ಸರ್ಕಾರವನ್ನು ಎಚ್ಚರಿಸುವ ತೀವ್ರ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ರಹ್ಮಾನಂದ ಸ್ವಾಮೀಜಿ, ಡಾ.ಮಹಾಂತೇಶ ಕಡಾಡಿ, ಶಶಿಧರ ದೇಮಶೆಟ್ಟಿ, ಸಿ.ಡಿ.ಹುಕ್ಕೇರಿ, ಅರ್ಜುನ್ ಪಂಗನ್ನವರ, ಬಸವರಾಜ ಖಾನಪ್ಪನವರ, ದಸ್ತಗಿರಿ ಪೈಲವಾನ, ಶಂಕರ ಗೋರೋಶಿ, ಸದಾಶಿವ ಗುದಗಗೋಳ, ನಿಂಗಪ್ಪ ಕುರಬೇಟ್, ವಿಶ್ವನಾಥ್ ಕಡಕೋಳ, ಸಿ.ಡಿ.ಗಿಡನ್ನವರ, ಎಂ.ಎಸ್.ವಾಲಿ, ಲಕ್ಷೀ ಪಾಟೀಲ, ಪವನ ಮಹಾಲಿಂಗಪೂರ, ಅಜೀಜ್ ಮೋಕಾಶಿ ಉಪಸ್ಥಿತರಿದ್ದರು.

PREV

Recommended Stories

''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ