ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಿರಂತರವಾಗಿ ದಾಳಿ

KannadaprabhaNewsNetwork |  
Published : Jun 10, 2024, 12:52 AM IST
ಫೋಟೋ : ೯ಎಚ್‌ಎನ್‌ಎಲ್೧ | Kannada Prabha

ಸಾರಾಂಶ

ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಿರಂತರವಾಗಿ ದಾಳಿಯಾಗುತ್ತಿದೆ ಎಂದು ತಿಳವಳ್ಳಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಎಸ್.ಎಂ.ಸೀತಾಳದ ಹೇಳಿದರು.

ಹಾನಗಲ್ಲ:ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಿರಂತರವಾಗಿ ದಾಳಿಯಾಗುತ್ತಿದೆ ಎಂದು ತಿಳವಳ್ಳಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಎಸ್.ಎಂ.ಸೀತಾಳದ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಕಾಲೇಜು ಆವರಣದಲ್ಲಿ ವಿವಿಧ ತಳಿಗಳ ಸಸಿಗಳನ್ನು ನೆಟ್ಟು ಮಾತನಾಡಿದ ಅವರು, ವಿಶ್ವದಲ್ಲಿ ಅರಣ್ಯ ಪ್ರದೇಶ ಪ್ರಮಾಣಕ್ಕೆ ಅನುಗುಣವಾಗಿ ಇಲ್ಲ. ಕಾಡು ನಾಶದಿಂದ ಪ್ರಕೃತಿ ವಿಕೋಪಗಳು ಏರ್ಪಡುತ್ತಿವೆ. ಇನ್ನಾದರೂ ಎಚ್ಚೆತ್ತುಕೊಂಡು ಪರಿಸರ ಪ್ರೀತಿ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಗಿಡ-ಮರ ಬೆಳೆಸುವ ಪರಿಪಾಠವನ್ನು ಹೊಂದಬೇಕು ಎಂದು ವಿದ್ಯಾರ್ಥಿಗಳಿಗೆ ಸೀತಾಳದ ಸಲಹೆ ನೀಡಿದರು.ಉಪನ್ಯಾಸಕರಾದ ಶಿವಕುಮಾರ, ಡಾ. ಲತಾ ಕೂಪರ್ಡೆ, ಮಹೇಶ ಅಕ್ಕಿವಳ್ಳಿ, ಕಾಲೇಜು ಸಿಬ್ಬಂದಿ ಗಣೇಶ ಗೌಳಿ, ಈರಣ್ಣ ಕುಂಬಾರ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌