ಸಾಧನೆಗೆ ಸತತ ಪ್ರಯತ್ನ ಮುಖ್ಯ: ಬಸವಂತಪ್ಪ

KannadaprabhaNewsNetwork |  
Published : Dec 04, 2024, 12:35 AM IST
ಕ್ಯಾಪ್ಷನ 2ಕೆಡಿವಿಜಿ37 ಮಾಯಕೊಂಡ ಗ್ರಾಮದಲ್ಲಿ ಬಸವೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿ ದಿಸೆಯಲ್ಲಿಯೇ ಎಲ್ಲರೂ ಶಿಕ್ಷಣದ ಜೊತೆಗೆ ಸಂಗೀತ, ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಬೇಕು. ಮಾಯಕೊಂಡವನ್ನು ಉತ್ತಮ ವಿದ್ಯಾ ಕೇಂದ್ರವಾಗಿ ಮಾಡುವಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.

- ಶ್ರೀ ಬಸವೇಶ್ವರ ಸರ್ಕಾರಿ ಕಾಲೇಜಿನಲ್ಲಿ ವಿವಿಧ ಘಟಕಗಳ ಉದ್ಘಾಟನೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ

ವಿದ್ಯಾರ್ಥಿ ದಿಸೆಯಲ್ಲಿಯೇ ಎಲ್ಲರೂ ಶಿಕ್ಷಣದ ಜೊತೆಗೆ ಸಂಗೀತ, ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಬೇಕು. ಮಾಯಕೊಂಡವನ್ನು ಉತ್ತಮ ವಿದ್ಯಾ ಕೇಂದ್ರವಾಗಿ ಮಾಡುವಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.

ಮಾಯಕೊಂಡ ಗ್ರಾಮದ ಶ್ರೀ ಬಸವೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೋಮವಾರ 2024- 2025ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ ಕ್ರಾಸ್ ಹಾಗೂ ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸದೃಢ ವ್ಯಕ್ತಿತ್ವ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಕಾರಿಯಾಗುತ್ತವೆ. ಅಪಾರವಾದ ಕನಸುಗಳೊಂದಿಗೆ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನ ಮತ್ತು ನಿರ್ದಿಷ್ಟ ಗುರಿಯೊಂದಿಗೆ ಸತತ ಪ್ರಯತ್ನಶೀಲರಾದರೆ ಸಾಧನೆ ಸುಲಭ. ಈ ನಿಟ್ಟಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಸಾಧನೆಗೆ ಅವಶ್ಯವಿರುವ ಎಲ್ಲ ಸೌಲಭ್ಯ ಒದಗಿಸುತ್ತಿದೆ. ಅವುಗಳ ಸದುಪಯೋಗ ಮುಖ್ಯ ಎಂದರು.

ನಿಮ್ಮೊಂದಿಗೆ ಸದಾ ನಾನಿದ್ದೇನೆ. ಅಗತ್ಯ ಸೌಲಭ್ಯಗಳ ಒದಗಿಸಲು ಬದ್ಧ. ಪ್ರಾಧ್ಯಾಪಕರು ನಿಮ್ಮ ಸೇವಾ ಅವಧಿಯಲ್ಲಿ ವಿದ್ಯಾರ್ಥಿಗಳು ಗುರುತಿಸುವಂತಹ ಸೇವೆ ಸಲ್ಲಿಸಬೇಕು. ಸರ್ಕಾರಿ ಶಾಲಾ-ಕಾಲೇಜಿನಲ್ಲಿ ದಾಖಲಾತಿ ಹೆಚ್ಚಿಸಲು ಸಿಬ್ಬಂದಿ, ಗ್ರಾಮಸ್ಥರ ಸಹಕಾರದೊಂದಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಉತ್ತಮ ಗ್ರಂಥಾಲಯಕ್ಕೆ ಈಗಾಗಲೇ ₹20 ಲಕ್ಷ ಅನುದಾನ ನೀಡಿದ್ದೇನೆ. ಉತ್ತಮ ಗ್ರಂಥಾಲಯ ಸ್ಥಾಪಿಸಲಿದ್ದು, ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ಸಲಹೆ ನೀಡಿದರು.

ಪ್ರಾಂಶುಪಾಲರಾದ ಡಾ.ತ್ರಿವೇಣಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಲತಾ ಮಲ್ಲಿಕಾರ್ಜುನ್, ಗ್ರಾಪಂ ಸದಸ್ಯರಾದ ಪರಶುರಾಮಪ್ಪ, ಮಲ್ಲಪ್ಪ, ಪ್ರೊ. ಬಾತಿ ಬಸವರಾಜ್, ಡಾ. ಜಿ.ಎಂ. ದಿನೇಶ್, ಡಾ. ಬಿ.ಸಿ. ಸದಾಶಿವಪ್ಪ, ಡಾ. ಬಿ.ಎಚ್. ಲಕ್ಷ್ಮಣ್, ಡಾ.ಸೋಮಶೇಖರ್, ಮಾಯಾಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ.ಹನುಮಂತಪ್ಪ, ಎಂ.ಜಿ.ಗೋಪಾಲ್, ರೈತ ಸಂಘದ ಬೀರಪ್ಪ ಇನ್ನಿತರರಿದ್ದರು.

- - - -2ಕೆಡಿವಿಜಿ37.ಜೆಪಿಜಿ:

ಮಾಯಕೊಂಡ ಗ್ರಾಮದಲ್ಲಿ ಬಸವೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಕೆ.ಎಸ್. ಬಸವಂತಪ್ಪ ಉದ್ಘಾಟಿಸಿದರು.

PREV

Recommended Stories

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಮಲ್ಲಿಕಾರ್ಜುನ ಸಹಕಾರಿಗೆ 29.84 ಲಕ್ಷ ಲಾಭ