ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ: ಜೈಬುನ್ನೀಸಾ

KannadaprabhaNewsNetwork |  
Published : Jun 13, 2025, 05:46 AM IST
ಕಾರ್ಯಕ್ರಮ ಉದ್ಘಾಟನೆ ನೆರವೇರಿಸುತ್ತಿರುವ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ. | Kannada Prabha

ಸಾರಾಂಶ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗುರುವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗುರುವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ವಿರುದ್ಧ ನಿರಂತರವಾಗಿ ಹೋರಾಡಿದರೆ ಮಾತ್ರ ದಕ್ಷಿಣ ಕನ್ನಡ ಜಿಲ್ಲೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಬಹುದು. ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣ ಅವಕಾಶದಿಂದ ವಂಚಿತರಾಗಬಾರದು. ಬಾಲಕಾರ್ಮಿಕತೆಯನ್ನು ನಿರ್ಮೂಲನೆಗೊಳಿಸಿ ಶಿಕ್ಷಣ ಎಂಬ ಅವಕಾಶವನ್ನು ಅವರಿಗೆ ನೀಡಿದರೆ ನಮ್ಮ ದೇಶ ಬಲಿಷ್ಠವಾಗಲಿದೆ ಎಂದರು.

ಬಾಲ ಕಾರ್ಮಿಕತೆಯನ್ನು ನಿರ್ಮೂಲನೆಗೊಳಿಸುವುದು ಕೇವಲ ಇಲಾಖೆಗಳ ಜವಾಬ್ದಾರಿಯಲ್ಲ, ನಮ್ಮೆಲ್ಲರ ಹೊಣೆ. ಹೊಟೇಲ್ ಅಥವಾ ಫ್ಯಾಕ್ಟರಿಗಳ ಹೊರಭಾಗ ಮತ್ತು ಒಳಭಾಗದಲ್ಲಿ ಸಂಬಂಧಪಟ್ಟ ಇಲಾಖೆಯ ದೂರವಾಣಿ ಸಂಖ್ಯೆ ಅಳವಡಿಸಬೇಕು. ಇದರಿಂದ ಸಾರ್ವನಿಕರಿಗೆ ಬಾಲಕಾರ್ಮಿಕರು ಕಂಡರೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲು ಸಹಾಯವಾಗುತ್ತದೆ ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ, ವಕೀಲ ನಿಖೇಶ್ ಶೆಟ್ಟಿ ಮಾತನಾಡಿ, 6ರಿಂದ 14 ವರ್ಷದೊಳಗಿನ ದುಡಿಯುವ ಮಕ್ಕಳ ರಕ್ಷಣೆ ಮಾಡಬೇಕು. ಬಾಲಕಾರ್ಮಿಕ ಪದ್ಧತಿಯನ್ನು ನಿಯಂತ್ರಿಸಲು ಅನೇಕ ಕಾಯ್ದೆ ಕಾನೂನುಗಳಿವೆ, ಸರ್ಕಾರದಿಂದ ಸೌಲಭ್ಯ, ಯೋಜನೆಗಳು ಸಿಗುತ್ತಿದ್ದು, ಸದುಪಯೋಗ ಮಾಡಬೇಕು ಎಂದರು.

ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ಎಂ.ಎಸ್. ಮಹಾದೇವ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಹಿರಿಯ ಅಧಿಕಾರಿ ಡಾ.ಸುಮಂಗಳ ನಾಯಕ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ಪ್ರದೀಪ್ ಡಿಸೋಜ, ಪರಿಸರಾಧಿಕಾರಿ ಡಾ. ಲಕ್ಷ್ಮಿಕಾಂತ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಭರತ್, ಸಹಾಯಕ ಕಾರ್ಮಿಕ ಆಯುಕ್ತೆ ನಾಝಿಯಾ ಸುಲ್ತಾನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅಕ್ಷತಾ ಆದರ್ಶ್, ಪ್ರಜ್ಞ ಕೌನ್ಸಿಲಿಂಗ್ ಸೆಂಟರ್ ನಿರ್ದೇಶಕಿ ಹಿಲ್ಡಾ ರಾಯಪ್ಪನ್, ಪಡಿ ಸರ್ಕಾರೇತರ ಸಂಸ್ಥೆಯ ನಿರ್ದೇಶಕ ರೆನ್ನಿ ಡಿಸೋಜ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಂಧಿ ಬಗ್ಗೆ ನಿರಂತರ ಅಪಪ್ರಚಾರ ಸಲ್ಲ
33 ಅಂಕ ನೀಡಿಕೆ ಬಗ್ಗೆ ಬರಗೂರು ಅಸಮಾಧಾನ