ಬರದಲ್ಲಿ ಗ್ರಾಮೀಣರ ಕೈಗೆ ವಿಬಿಜಿ-ರಾಮ್‌ಜಿಯಡಿ ನಿರಂತರ ಕೆಲಸ: ಈಶ್ವರ ಖಂಡ್ರೆ

KannadaprabhaNewsNetwork |  
Published : Nov 22, 2026, 02:00 AM IST
ಸಚಿವರು ಕೃಷಿ ಕೂಲಿ ಕಾರ್ಮಿಕರೊಂದಿಗೆ ಚರ್ಚೆ ನಡೆಸಿದರು.  | Kannada Prabha

ಸಾರಾಂಶ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿದ್ದು, ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) ವಿಬಿಜಿ-ರಾಮ್‌ಜಿ ಯೋಜನೆಯಡಿ ನಿರಂತರ ಕೆಲಸ ನೀಡುವಂತೆ ಸೂಚನೆ ನೀಡಿದ್ದೇನೆ.

ಇನ್ನೂ 50 ದಿನ ಹೆಚ್ಚಿಸಲು ಕೇಂದ್ರಕ್ಕೆ ಪತ್ರ ಸಚಿವ ಗ್ರಾಮೀಣಾಭಿವೃದ್ಧಿ ಸಚಿವ ಹೇಳಿಕೆಕನ್ನಡಪ್ರಭ ವಾರ್ತೆ ಗದಗ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿದ್ದು, ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) ವಿಬಿಜಿ-ರಾಮ್‌ಜಿ ಯೋಜನೆಯಡಿ ನಿರಂತರ ಕೆಲಸ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವರಾದ ಈಶ್ವರ ಖಂಡ್ರೆ ಹೇಳಿದರು.

ಗದಗ ತಾಪಂ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಪಂ ತಾಂಡಾ ಸ್ತೆಯಲ್ಲಿರುವ ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿಕಾರರೊಂದಿಗೆ ಅವರು ಚರ್ಚೆ ನಡೆಸಿದರು. ಬರಗಾಲದ ಕಾರಣ ಗ್ರಾಮೀಣ ಜನರು ಕೆಲಸ ಅರಸಿ ವಲಸೆ ಹೋಗುವುದನ್ನು ತಡೆಯಲು ವಿಬಿಜಿ ರಾಮ್‌ಜಿ ಯೋಜನೆಯಡಿ ನಿರಂತರ ನೀಡಬೇಕಾಗಿದೆ. ಗ್ರಾಮೀಣ ಭಾಗದ ಪ್ರತಿ ಜಾಬ್‌ ಕಾರ್ಡ್‌ಗೆ ಕೇಂದ್ರ ಸರಕಾರ ವರ್ಷಕ್ಕೆ 125 ದಿನ ಕೆಲಸ ನಿಗದಿ ಪಡಿಸಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರ ಹಿತದೃಷ್ಟಿಯಿಂದ ಇನ್ನೂ 50 ದಿನ ಸೇರಿಸಿ ಪ್ರತಿ ಜಾಬ್‌ಕಾರ್ಡ್‌ಗೆ 175 ದಿನ ಕೆಲಸ ನೀಡಲು ಕೋರಿ ಪತ್ರ ಬರೆಯಲಾಗಿದೆ ಎಂದು ಕೂಲಿಕಾರರಿಗೆ ತಿಳಿಸಿದರು. ರೈತರು ಹಾಗೂ ಕೂಲಿಕಾರರಿಗೆ ಅವಶ್ಯವಾಗಿರುವ ಬದು ನಿರ್ಮಾಣ ಮಾಡಿಕೊಳ್ಳಲು ಅವಕಾಶ ನೀಡುವಂತೆ ರೈತರು ಮನವಿ ಮಾಡಿಕೊಂಡರು. ಇದಕ್ಕೆ ಸಚಿವರು ಸಕಾರಾತ್ಮಕ ಸ್ಪಂದಿಸಿದರು. ನಂತರ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪೂರ್ಣಗೊಂಡ ಕೃಷಿ ಹೊಂಡ ಕಾಮಗಾರಿಯ ವೀಕ್ಷಿಸಿ, ಇನ್ನಷ್ಟು ಕೃಷಿ ಹೊಂಡ ಕಾಮಗಾರಿಗೆ ಅವಕಾಶ ನೀಡುವಂತೆ ತಿಳಿಸಿದರು. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ ಬಿವೈ), ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) ಮತ್ತು ಅಟಲ್ ಪಿಂಚಣಿ ಯೋಜನೆ (ಎಪಿವೈ) ಮಾಡಿಸಿಕೊಳ್ಳುವಂತೆ ಕೂಲಿಕಾರರಿಗೆ ತಿಳಿಸಿದರು.

ಈ ಸಂದರ್ಭ ಜಿಪಂ ಸಿಇಒ ಮುಕುಲ್ ಜೈನ್, ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಾಪಂ ಇಓ ಡಾ. ಎಚ್.ಎಸ್. ಜಿನಗಿ, ಸಹಾಯಕ ನಿರ್ದೇಶಕ ಕುಮಾರ ಪೂಜಾರ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುರೇಶ ಲಮಾಣಿ ಸೇರಿದಂತೆ ಅನೇಕ ಅಧಿಕಾರಿಗಳು, ಗ್ರಾಮಸ್ಥರು ಕೂಲಿ ಕಾರ್ಮಿಕರು ಹಾಜರಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸಲಾಕೆ ಹಿಡಿದು ಮಣ್ಣು ತುಂಬಿ ಕೂಲಿಕಾರ್ಮಿಕ ಮಹಿಳೆಯರಿಗೆ ಹುರಿದುಂಬಿಸಿದರು. ಶ್ರಮ ಜೀವಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಹಿತ್ಯ ಸಮ್ಮೇಳನಗಳು ಚಿಂತನಾ ವೇದಿಕೆಗಳಾಗಲಿ ಡಾ. ಶರಣಬಸಪ್ಪ ಕೋಲ್ಕಾರ್
ಕೊಪ್ಪಳ ಜಿಲ್ಲಾ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ