ಈ ಹಿಂದೆ 1980ನೇ ಇಸವಿಯಲ್ಲಿ 2276 ಅಡಿ ಭರ್ತಿಯಾಗಿರುವುದನ್ನು ಬಿಟ್ಟರೆ ಯಾವುದೇ ವರ್ಷದಲ್ಲಿ ಮೇ ತಿಂಗಳಲ್ಲಿ ಅಣೆಕಟ್ಟು ಭರ್ತಿಯಾಗಿರಲಿಲ್ಲ.
ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ
ಕೇರಳ ರಾಜ್ಯದ ವಯನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯವು ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ 2280 ಅಡಿ ಭರ್ತಿಯಾಗಿದ್ದು, ಜಲಾಶಯ ಭರ್ತಿಗೆ ಕೇವಲ 4 ಅಡಿ ಬಾಕಿ ಇದೆ.ಈ ಹಿಂದೆ 1980ನೇ ಇಸವಿಯಲ್ಲಿ 2276 ಅಡಿ ಭರ್ತಿಯಾಗಿರುವುದನ್ನು ಬಿಟ್ಟರೆ ಯಾವುದೇ ವರ್ಷದಲ್ಲಿ ಮೇ ತಿಂಗಳಲ್ಲಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಶನಿವಾರ ಕಬಿನಿ ಜಲಾಶಯಕ್ಕೆ 17 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‌ಗಳಿಂದ 8,000 ಕ್ಯುಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 2284 ಅಡಿ ಇದ್ದು, ಶನಿವಾರ ನೀರಿನ ಮಟ್ಟ 2280 ಅಡಿ ನೀರು ತುಂಬಿದೆ. ಜಲಾಶಯ ಭರ್ತಿಯಾಗಲು ಇನ್ನೂ ಎರಡುವರೆ ಟಿಎಂಸಿ ನೀರಿನ ಅವಶ್ಯಕತೆ ಇದೆ, ಜಲಾಶಯದ ಹಿತದೃಷ್ಟಿಯಿಂದ ನಾಲ್ಕು ಅಡಿಗಳ ಅಂತರವನ್ನು ಕಾಯ್ದುಕೊಳ್ಳಲಾಗಿದೆ.ಶನಿವಾರ ಕೇರಳ ರಾಜ್ಯದ ವಯನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದರುವುದರಿಂದ ಒಳಹರಿವಿನ ಪ್ರಮಾಣವು ಸಹ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.ಕಬಿನಿ ಜಲಾಶಯವು ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಿದೆ, ಇದಲ್ಲದೆ ರಾಜ್ಯದಲ್ಲಿ ಪ್ರತಿವರ್ಷವು ಮೊದಲ ಬಾರಿಗೆ ಭರ್ತಿಯಾಗುವ ಜಲಾಶಯ ಎಂಬ ಹೆಸರು ಹೊಂದಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.