ಕನ್ನಡಪ್ರಭ ವಾರ್ತೆ ಕುಂದಾಪುರ
ಅವರು ಸುಜ್ಞಾನ ಎಜುಕೇಶನ್ ಟ್ರಸ್ಟ್ ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ಸೋಮವಾರ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭದಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವ, ರಾಜಪ್ರಭುತ್ವ, ನಿರಂಕುಶ ಪ್ರಭುತ್ವ ಈ ಮೂರು ಸ್ತರದ ಆಡಳಿತ ವ್ಯವಸ್ಥೆಗಳು ಜಗತ್ತಿನಲ್ಲಿವೆ. ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಇಲ್ಲಿ ಪ್ರಜೆಗಳೇ ಪ್ರಭುಗಳು. ಸಂವಿಧಾನ, ಶಾಲೆಗಳಲ್ಲಿ ಶಾಲಾ ಸರ್ಕಾರ ರಚನೆ ಮಾಡುವುದರಿಂದ ನಮ್ಮ ಆಡಳಿತ ವ್ಯವಸ್ಥೆಗಳ ಕುರಿತು ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಹೆಚ್ಚುತ್ತದೆ. ಬುದ್ಧಿವಂತರು ಇಡೀ ಜಗತ್ತನ್ನು ಆಳುತ್ತಾರೆ. ಹೀಗಾಗಿ ಗ್ರಾಮೀಣ ಪ್ರದೇಶದ ಸುದ್ದಿಗಳಿಂದ ಹಿಡಿದು ಇಡೀ ಜಗತ್ತಿನ ಸುದ್ದಿಗಳನ್ನು ಓದಬೇಕು. ಓದುವವರು ಸಾಮ್ರಾಜ್ಯವನ್ನೇ ಕಟ್ಟಬಹುದು ಎಂದರು.ಸಮಾರಂಭ ಉದ್ಘಾಟಿಸಿ ಮಾತನಾಡಿದ ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನ ಜಿಲ್ಲಾ ಚೀಫ್ ಕಮಿಷನರ್ ಜಯಕರ ಶೆಟ್ಟಿ ಇಂದ್ರಾಳಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಜವಾಬ್ದಾರಿ, ನಾಯಕತ್ವ ಮೈಗೂಡಿಸಿಕೊಳ್ಳುವ ಸಲುವಾಗಿ ಮಂತ್ರಿಮಂಡಲ ರಚನೆ ಮಾಡಲಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಚಾರಗಳ ಬಗ್ಗೆ ಗುರಿ, ಕನಸು ಇಟ್ಟುಕೊಳ್ಳಬೇಕು. ವಿದ್ಯೆ ಎಂದರೆ ಪಾಠ ಪ್ರವಚನ ಮಾತ್ರವಲ್ಲ. ಪಠ್ಯೇತರ ಚಟುವಟಿಗಳಲ್ಲೂ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ನೂತನವಾಗಿ ಆಯ್ಕೆಯಾದ ಮಂತ್ರಿಮಂಡಲದ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಸುಜ್ಞಾನ್ ಎಜ್ಯುಕೇಶನ್ ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿಕ್ಷಕಿ ಸಪ್ತಮಿ ವಂದಿಸಿದರು. ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.