ಹುಬ್ಬಳ್ಳಿ:
ಬುಧವಾರ ಮಹಾನಗರ ಪಾಲಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋನ್ ಇನ್ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಕುರಿತು ಚರ್ಚಿಸಲು ಫೆ. 10ರಂದು ವಿಶೇಷ ಸಾಮಾನ್ಯ ಸಭೆ ಆಯೋಜಿಸಲಾಗಿದೆ ಎಂದರು.
ಹಲವಾರು ವಾರ್ಡ್ಗಳಿಗೆ ನಿರಂತರ ನೀರು ಪೂರೈಕೆಗಾಗಿ ಪೈಪ್ಗಳನ್ನು ಅಳವಡಿಸಲಾಗಿದ್ದರೂ, ಅಲ್ಲಿ 3-4 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿತ್ತು. ಈ ಎಲ್ಲ ವಾರ್ಡ್ಗಳಿಗೆ ಮಾರ್ಚ್‌ನಿಂದ ನಿರಂತರ ನೀರು ಪೂರೈಸಲಾಗುವುದು. ಇನ್ನುಳಿದ ವಾರ್ಡ್ಗಳಲ್ಲಿ ಪೈಪ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ ಎಂದರು.ಈಗಾಗಲೇ ಎಲ್ ಆ್ಯಂಡ್ ಟಿ ಕಂಪನಿ ಹುಬ್ಬಳ್ಳಿ-ಧಾರವಾಡದಲ್ಲಿ 24 ಒವರ್ ಹೆಡ್ ಟ್ಯಾಂಕ್ಗಳನ್ನು ನಿರ್ಮಿಸುತ್ತಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ. ಅಮ್ಮಿನಬಾವಿಯಿಂದ ಹುಬ್ಬಳ್ಳಿಗೆ ಪ್ರತ್ಯೇಕ ಪೈಪ್ ಅಳವಡಿಕೆ ಕಾಮಗಾರಿ ಬಹುತೇಕ ರ್ಪೂಣಗೊಂಡಿದ್ದು, ರಾಯಾಪುರ ಬಳಿ 17.6 ಕಿಮೀ ವರೆಗಿನ ಅಲ್ಪಮಟ್ಟಿನ ಕಾಮಗಾರಿ ಬಾಕಿ ಇದೆ. ಅಮ್ಮಿನಬಾವಿಯಿಂದ 18 ಎಂಎಲ್ಡಿ ನೀರು ನೇರವಾಗಿ ಧಾರವಾಡಕ್ಕೆ ಹಾಗೂ 25 ಎಂಎಲ್ಡಿ ನೀರು ಹುಬ್ಬಳ್ಳಿಗೆ ಪೂರೈಕೆಯಾಗಲಿದೆ ಎಂದರು.
ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಪಿಜಿ ಹಾಸ್ಟೆಲ್, ಕೋಚಿಂಗ್ ಸೆಂಟರ್, 24/7 ಗ್ರಂಥಾಲಯಗಳಿಗೆ ಪೂರೈಕೆ ಮಾಡುವ ನೀರಿಗೆ ವಾಣಿಜ್ಯ ದರದಡಿ ಶುಲ್ಕ ಆಕರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಫೋನ್ ಇನ್ ಕಾರ್ಯಕ್ರಮದಲ್ಲಿ 25 ಕರೆಗಳು ಬಂದಿದ್ದು, 35 ದೂರುಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪ ಆಯುಕ್ತ ವಿಜಯಕುಮಾರ ಸೇರಿದಂತೆ ಇತರರು ಇದ್ದರು.