ಅಕುಶಲ ಕೂಲಿಕಾರರಿಗೆ ನಿರಂತರ ಕೆಲಸ

KannadaprabhaNewsNetwork |  
Published : Jun 12, 2026, 02:30 AM IST
ಪೋಟೊ11ಕೆಎಸಟಿ2: ಕುಷ್ಟಗಿ ತಾಲೂಕಿನ ಚಳಗೇರಾ ಹಾಗೂ ಹನುಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನರೇಗಾ ಕಾಮಗಾರಿಗಳ ಸ್ಥಳಕ್ಕೆ ತಾಪಂ ಇಒ ಅಮರೇಶ ಭೇಟಿ ನೀಡಿ ಕಾಮಗಾರಿ ಪರೀಶಿಲಿಸಿ ಕೂಲಿಕಾರರೊಂದಿಗೆ ಮಾತನಾಡಿದರು. | Kannada Prabha

ಸಾರಾಂಶ

ಸ್ಥಳೀಯವಾಗಿ ಉದ್ಯೋಗ ಒದಗಿಸಿ ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜತೆಯಾಗಿ ನಿಂತಿರುವ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು‌

ಕುಷ್ಟಗಿ: ಮಹಾತ್ಮ ಗಾಂಧಿ ನರೇಗಾ ಯೋಜನೆಯಂತೆ ವಿಬಿಜಿ ರಾಮ್ ಜಿ ಕೂಡ ಅಕುಶಲ ಕೂಲಿಕಾರರಿಗೆ ನಿರಂತರ ಕೆಲಸ ಇರುವುದರಿಂದ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಾಪಂ ಇಒ ಅಮರೇಶ್ ಹೇಳಿದರು.

ತಾಲೂಕಿನ ಚಳಗೇರಾ ಹಾಗೂ ಹನುಮನಾಳ ಗ್ರಾಪಂ ವ್ಯಾಪ್ತಿಯ ನರೇಗಾ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರೀಶಿಲಿಸಿ ಕೂಲಿಕಾರರೊಂದಿಗೆ ಮಾತನಾಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ನಿರಂತರ ಕೆಲಸ ದೊರೆಯಲಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದರು.

ನರೇಗಾ ಯೋಜನೆಯಡಿ ಸರಿಯಾಗಿ ಕೆಲಸ ನಿರ್ವಹಿಸಿ ವೇತನ ಪಡೆಯಬಹುದು. ಕೆಲಸದ ವಿಷಯದಲ್ಲಿ ಯಾವುದೇ ಅಡೆತಡೆ ಇರುವುದಿಲ್ಲ ಎಂದು ತಿಳಿಸಿದ ಅವರು, ಗ್ರಾಮೀಣ ಪ್ರದೇಶದ ಅಕುಶಲ ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಿ ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜತೆಯಾಗಿ ನಿಂತಿರುವ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು‌ ಎಂದು ಸಲಹೆ ನೀಡಿದರು.

ಚಳಗೇರಾ ಗ್ರಾಪಂ ವ್ಯಾಪ್ತಿಯ ಎಸ್‌ಡಬ್ಲ್ಯೂಎಂ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹನುಮನಾಳ ಗ್ರಾಪಂಗೆ ಭೇಟಿ ನೀಡಿ ವಿವಿಧ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ವಿವಿಧ ಯೋಜನೆ ಕುರಿತು ಮಾಹಿತಿ ಪಡೆದು ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಪಂ ನರೇಗಾ ಸಹಾಯಕ ನಿರ್ದೇಶಕ ನಿಂಗನಗೌಡ ವಿ.ಎಚ್, ಕಾರ್ಯಕ್ರಮ ವ್ಯವಸ್ಥಾಪಕ ರವಿಗೌಡರ್,‌ ಪಿಡಿಒ ಶಂಕರ್, ಪ್ರಶಾಂತ ಹಿರೇಮಠ, ತಾಲೂಕು ಐಇಸಿ ಸಂಯೋಜಕ ಚಂದ್ರಶೇಖರ ಜಿ, ತಾಂತ್ರಿಕ ಸಂಯೋಜಕ ಬಸವರಾಜ್ ಕೆ, ತಾಂತ್ರಿಕ ಸಹಾಯಕರು, ಗ್ರಾಪಂ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ - ಮಕ್ಕಳ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರ
ಎಂಐಟಿಕೆ ವಿದ್ಯಾರ್ಥಿನಿಯರಿಂದ ಸ್ಮಾರ್ಟ್ ಹೈಡ್ರೋಪೋನಿಕ್ಸ್