ಬಾಕಿ ಬಿಲ್ ಬಿಡುಗಡೆಗಾಗಿ ಮುಂದುವರಿದ ಗುತ್ತಿಗೆದಾರರ ಪ್ರತಿಭಟನೆ

KannadaprabhaNewsNetwork |  
Published : Aug 31, 2026, 02:15 AM IST
ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರ ಸಂಘ ಹಾಗೂ ವಿವಿಧ ಗುತ್ತಿಗೆದಾರರ ಸಂಘಗಳ ಸಹಯೋಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ 6ನೇ ದಿನವನ್ನು ಪೂರೈಸಿ 7ನೇ ದಿನಕ್ಕೆ ಕಾಲಿಟ್ಟಿದೆ. | Kannada Prabha

ಸಾರಾಂಶ

15ನೇ ಹಣಕಾಸು ಅನುದಾನದಡಿ ಕೈಗೊಂಡು ಪೂರ್ಣಗೊಳಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಾಕಿ ಬಿಲ್‌ಗಳನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ಸ್ಥಳೀಯ ಪುರಸಭೆ ಎದುರು ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರ ಸಂಘ ಹಾಗೂ ವಿವಿಧ ಗುತ್ತಿಗೆದಾರರ ಸಂಘಗಳ ಸಹಯೋಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ 6ನೇ ದಿನವನ್ನು ಪೂರೈಸಿ 7ನೇ ದಿನಕ್ಕೆ ಕಾಲಿಟ್ಟಿದೆ.

ಸವಣೂರು: 15ನೇ ಹಣಕಾಸು ಅನುದಾನದಡಿ ಕೈಗೊಂಡು ಪೂರ್ಣಗೊಳಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಾಕಿ ಬಿಲ್‌ಗಳನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ಸ್ಥಳೀಯ ಪುರಸಭೆ ಎದುರು ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರ ಸಂಘ ಹಾಗೂ ವಿವಿಧ ಗುತ್ತಿಗೆದಾರರ ಸಂಘಗಳ ಸಹಯೋಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ 6ನೇ ದಿನವನ್ನು ಪೂರೈಸಿ 7ನೇ ದಿನಕ್ಕೆ ಕಾಲಿಟ್ಟಿದೆ.ಕರ್ನಾಟಕ ರಾಜ್ಯ ಮಾದರ ಗುತ್ತಿಗೆದಾರರ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ವಿವಿಧ ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಕಾಮಗಾರಿಗಳನ್ನು ಪೂರ್ಣಗೊಳಿಸಿ ಹಲವು ದಿನಗಳು ಕಳೆದಿದ್ದರೂ ಬಿಲ್‌ಗಳ ಪಾವತಿ ಆಗದಿರುವುದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯ 6ನೇ ದಿನವಾದ ಶನಿವಾರ ಗುತ್ತಿಗೆದಾರರು ನೇಣು ಬಿಗಿದುಕೊಳ್ಳುವ ಆತ್ಮಹತ್ಯೆ ಅಣಕು ಪ್ರದರ್ಶನ ನಡೆಸುವ ಮೂಲಕ ತಮ್ಮ ಅಸಹಾಯಕತೆ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದರು.ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು ಸ್ವಂತ ಬಂಡವಾಳ ಹೂಡಿಕೆ ಮಾಡಿದ್ದು, ಕಾರ್ಮಿಕರು, ಸಾಮಗ್ರಿ ಪೂರೈಕೆದಾರರು ಹಾಗೂ ಇತರೆ ಸಂಬಂಧಿತರಿಗೆ ಹಣ ಪಾವತಿಸಬೇಕಾಗಿದೆ. ಆದರೆ ಕಾಮಗಾರಿಗಳ ಬಿಲ್‌ಗಳು ದೀರ್ಘಕಾಲದಿಂದ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸಾಲದ ಒತ್ತಡ ಹಾಗೂ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.ಘಟನಾ ಸ್ಥಳಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಸಿ.ಚಂದ್ರಪ್ಪ ಭೇಟಿ ನೀಡಿ, ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕುಗಳ ಮಾಹಿತಿಯನ್ನು ಸರಕಾರ ಹಾಗೂ ಪೌರಾಡಳಿತ ನಿರ್ದೇಶನಾಲಯ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಕುರಿತು ಅತಿ ಶೀಘ್ರದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಆದ್ದರಿಂದ ಪ್ರತಿಭಟನೆ ಹಿಂಪಡೆಯಲು ಮನವಿ ಮಾಡಿದರು.ಇದಕ್ಕೆ ಒಪ್ಪದ ಪ್ರತಿಭಟನಾಕಾರರು, ಸಾರ್ವಜನಿಕರ ಅನುಕೂಲಕ್ಕಾಗಿ ನೀಡಲಾದ ಅನುದಾನದಡಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಹಸ್ತಾಂತರಿಸಿದ್ದೇವೆ. ಆದರೆ ಕಾಮಗಾರಿ ಪೂರ್ಣಗೊಂಡಿದ್ದರೂ ಬಿಲ್‌ಗಳ ಪಾವತಿ ವಿಳಂಬವಾಗುತ್ತಿರುವುದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತು ಗುತ್ತಿಗೆದಾರರು ಚರ್ಚೆ ನಡೆಸಿದರು.

ನಮ್ಮ ಕರ್ನಾಟಕ ಸೇನೆ ತಾಲೂಕಾಧ್ಯಕ್ಷ ಪರಶುರಾಮ ಈಳಗೇರ ಗುತ್ತಿಗೆದಾರರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಬಿಲ್ ಪಾವತಿಸಲು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾದರ ಗುತ್ತಿಗೆದಾರರ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಣ್ ಕನವಳ್ಳಿ, ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರ ಸಂಘದ ಕಾರ್ಯದರ್ಶಿ ಶಿವಾನಂದ ಹುಲ್ಲಮ್ಮನವರ, ಗುತ್ತಿಗೆದಾರರಾದ ಷಣ್ಮುಖಗೌಡ ನಿಂಗನಗೌಡ್ರ, ಪ್ರವೀಣ ಬಾಲೆಹೊಸೂರು,ವಿನಾಯಕ್ ಬೋವಿ, ಸಿದ್ದಪ್ಪ ಗುಳ್ನಾಯ್ಕರ, ಗೌಸ ಪೀರಜಾದೆ, ವಿನಾಯಕ ಈಳಿಗೆರ, ಜಗದೀಶ್ ಪೂಜಾರ, ರಾಘವೇಂದ್ರ ಬಾಲೆಹೊಸೂರ್ ಮಹೇಶ್ ಅಪ್ಪಣ್ಣವರ, ಮಂಜುನಾಥ ಖೈರನವರ, ನೌಶಾದ ಲೋಹಾರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯಿಂದ ಮಲಗುಂಡಿ ಸ್ವಚ್ಛತೆ
ಹಾವೇರಿಯಲ್ಲಿ ಭಕ್ತಿಭಾವದಿಂದ ನೆರವೇರಿದ ರಾಯರ ಆರಾಧನೆ