ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಆದ್ಯತೆ ನೀಡಿ

KannadaprabhaNewsNetwork |  
Published : Sep 07, 2025, 01:00 AM IST
ಹನೂರು ತಾಲೂಕಿನ ಬಂಡಳ್ಳಿ, ಮಣಗಳ್ಳಿ ಗ್ರಾಮಗಳ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈ ಗೊಂಡಿರುವ ರಸ್ತೆ ಅಭಿವೃದ್ದಿ ಡಾಂಬರೀಕರಣದ  ಕಾಮಗಾರಿ ಸ್ಥಳಕ್ಕೆ ಶಾಸಕ ಎಂ. ಆರ್. ಮಂಜುನಾಥ್ ಬೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ತಾಲೂಕಿನ ಬಂಡಳ್ಳಿ, ಮಣಗಳ್ಳಿ ಗ್ರಾಮಗಳ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಡಾಂಬರೀಕರಣದ ಕಾಮಗಾರಿ ಸ್ಥಳಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಬಂಡಳ್ಳಿ, ಮಣಗಳ್ಳಿ ಗ್ರಾಮಗಳ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಡಾಂಬರೀಕರಣದ ಕಾಮಗಾರಿ ಸ್ಥಳಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿ ಅವರು, ಕಾಮಗಾರಿ ಹೊತ್ತ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು. ಜೊತೆಗೆ ಸುಮಾರು 24.80 ಕೋಟಿ ರು. ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಜವಾಬ್ದಾರಿ ಹೊತ್ತವರು ಸಂಪೂರ್ಣವಾಗಿ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವುದರ ಜತೆಗೆ ಕಾಮಗಾರಿಯನ್ನು ನಿಗಧಿತ ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದರು. ಈ ಮಾರ್ಗದ ರಸ್ತೆಯಲ್ಲಿ ನಿತ್ಯ ಬಸ್ಸು ಲಾರಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಆದರೆ ಈ ಮಾರ್ಗದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿ ಹಾಳಾಗಿದ್ದು, ಮಳೆ ಬಂದ ವೇಳೆ ಗುಂಡಿಗಳಲ್ಲಿ ನೀರು ನಿಲ್ಲುವಂತಾಗಿತ್ತು. ಇದರಿಂದ ವಾಹನ ಸವಾರರು ಸಂಚಾರಿಸಲು ತುಂಬಾ ತೊಂದರೆ ಅನುಭವಿಸುತ್ತಿದ್ದರು. ಇದೀಗ ಕಾಮಗಾರಿ ನಡೆಯುತ್ತಿದ್ದು ಎಲ್ಲರಿಗೂ ಅನುಕೂಲ ಆಗಲಿದೆ ಎಂದರು.

ಇನ್ನು ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಜನ ಸಾಮಾನ್ಯರಿಗೆ ಕುಡಿಯುವ ನೀರು, ಸ್ವಚ್ಚತೆ, ರಸ್ತೆ ವಿದ್ಯುತ್‌, ಇನ್ನಿತರ ಅಗತ್ಯ ಮೂಲ ಸೌಕರ್ಯ ಕೊರತೆ ಇದ್ದು, ಪ್ರತಿ ಗ್ರಾಮಗಳಲ್ಲಿ ತಲೆ ದೂರಿರುವ ಸಮಸ್ಯೆಗಳ ಬಗ್ಗೆ ಈಗಾಗಲೆ ಮಾಹಿತಿ ಸಂಗ್ರಹಿಸಲಾಗಿದೆ ಮತ್ತು ಸಮಸ್ಯೆ ಗಳ ಬಗ್ಗೆ ಗಮನ ಹರಿಸಿ ಹಂತ ಹಂತವಾಗಿ ಮೂಲಭೂತ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ, ಎಇ ಸುರೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರವಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಾಬು, ಮುಖಂಡರುಗಳಾದ ಸೈಯದ್ ಬಸರತ್, ವಿಜಯ್ ಕುಮಾರ್,ಎಸ್ .ಆರ್. ಮಹದೇವ್ ,ಹಾಗೂ ಇನ್ನಿತರರು ಉಪಸ್ಥಿತರಿದ್ದರು.

PREV

Recommended Stories

ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500