ಇನ್ನು ಮುಂದೆ ರಸ್ತೆ ಅಗೆದವರೇ ಪುನಶ್ಚೇತನ ಮಾಡಬೇಕು: ಕೃಷ್ಣ

KannadaprabhaNewsNetwork |  
Published : Oct 31, 2026, 03:30 AM ISTUpdated : Oct 31, 2026, 05:03 AM IST
krishna byre gowda

ಸಾರಾಂಶ

ದಿನೇ ದಿನೇ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಅಭಿವೃದ್ಧಿಗೆ ಸಮಗ್ರ ದೀರ್ಘಕಾಲದ ಮಹಾ ಯೋಜನೆ ರೂಪಿಸಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಬೆಂಗಳೂರು : ದಿನೇ ದಿನೇ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಅಭಿವೃದ್ಧಿಗೆ ಸಮಗ್ರ ದೀರ್ಘಕಾಲದ ಮಹಾ ಯೋಜನೆ ರೂಪಿಸಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಪಿಎಸ್ ಆಧಾರಿತ ಫೀಡರ್ ಬಸ್ ಸೌಲಭ್ಯ

ಶುಕ್ರವಾರ ನಗರದಲ್ಲಿ ನಡೆದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕನೇ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಖಾಸಗಿ ವಾಹನಗಳ ಬಳಕೆ ಕಡಿಮೆ ಮಾಡಲು ಮೆಟ್ರೋ ನಿಲ್ದಾಣಗಳಿಗೆ ‘ಫೀಡರ್ ಬಸ್’ ಸೇವೆ ಅತ್ಯಗತ್ಯ. ಮೆಟ್ರೋ ನಿಲ್ದಾಣಗಳ 2 ರಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಬಿಎಂಟಿಸಿ ವತಿಯಿಂದ ಜಿಪಿಎಸ್ ಆಧಾರಿತ ಫೀಡರ್ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಶಿಲ್ಪಾ ನಾಗ್, ನಿತಿಶ್, ಜಲಮಂಡಳಿ ಅಧ್ಯಕ್ಷೆ ಮಂಜುಳಾ, ಬಿಎಂಆರ್.ಡಿಎ ಆಯುಕ್ತ ರಾಜೇಂದ್ರ ಚೋಳನ್, ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್, ಜಿ. ಜಗದೀಶ್, ಡಾ.ರಾಜೇಂದ್ರ ಕೆ.ವಿ, ಬಿಎಂಟಿಸಿ ಎಂಡಿ ರಘುನಂದನ್ ಮೂರ್ತಿ, ಬಿಎಸ್.ಡಬ್ಲ್ಯು.ಎಂಎಲ್ ಸಿಇಒ ಕರೀಗೌಡ, ಅಗ್ನಿಶಾಮಕ, ಬೆಸ್ಕಾಂ, ಮೆಟ್ರೋ ಅಧಿಕಾರಿಗಳು ಉಪಸ್ಥಿತರಿದ್ದರು.

 ರಸ್ತೆ ಅಗೆದವರೇ ದುರಸ್ಥಿ ಮಾಡಲು ತಾಕೀತು 

ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಹಾಳಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದ ಸಚಿವರು, ವಿವಿಧ ಇಲಾಖೆಗಳು ರಸ್ತೆ ಅಗೆಯುವುದರಿಂದ ನಾಗರಿಕರು ಅನುಭವಿಸುವ ತೊಂದರೆಗೆ ಪಾಲಿಕೆಗಳು ದೂಷಣೆಗೊಳಗಾಗುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು, ‘ಯಾವ ಸಂಸ್ಥೆಯು ರಸ್ತೆಯನ್ನು ಅಗೆಯುತ್ತದೆಯೋ, ಅದೇ ಸಂಸ್ಥೆಯೇ ಅದನ್ನು ಸಂಪೂರ್ಣವಾಗಿ ಮುಚ್ಚುವ ಜವಾಬ್ದಾರಿ ಹೊರಬೇಕು’ ಎಂದು ಕೃಷ್ಣಬೈರೇಗೌಡ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ