ಭವಿಷ್ಯಕ್ಕೆ ಉತ್ತಮ ಪರಿಸರವನ್ನು ಕೊಡುಗೆ ನೀಡಿ

KannadaprabhaNewsNetwork |  
Published : Jun 06, 2026, 02:45 AM IST
(ಫೋಟೊಬಿಕೆಟಿ1, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉದ್ಯಾನವನದಲ್ಲಿ ಗಿಡ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪರಿಸರ ನಮ್ಮ ಜೀವನದ ಆಧಾರವಾಗಿದ್ದು, ಅದನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆಪರಿಸರ ನಮ್ಮ ಜೀವನದ ಆಧಾರವಾಗಿದ್ದು, ಅದನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಹೇಳಿದರು.

ನವನಗರದ ಸೆಕ್ಟರ್‌ ನಂ.70ರಲ್ಲಿರುವ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಉದ್ಯಾನವನದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಪ್ರಾದೇಶಿಕ ಹಾಗೂ ಅರಣ್ಯ ಇಲಾಖೆ, ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉದ್ಯಾನವನದಲ್ಲಿ ಗಿಡ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಕೃತಿಯಲ್ಲಿ ನಮ್ಮ ಕಣ್ಣಿಗೆ ಕಾಣುವ ನೆಲ, ಜಲ, ಪ್ರಾಣಿ, ಪಕ್ಷಿ. ಗಿಡ, ಮರಗಳು ಪರಿಸರದ ಅಂಗಗಳಾಗಿವೆ. ಗಿಡಮರಗಳಿಂದ ನಮಗೆ ಆಮ್ಲಜನಕ ಲಭ್ಯವಾಗುತ್ತಿದ್ದು, ನಾವು ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ಪ್ರಕೃತಿಯಲ್ಲಿ ಸಿಗುವ ಸಂಪನ್ಮೂಲಗಳನ್ನು ಮಿತವಾಗಿ ಬಳಸುವ ಮೂಲಕ ಪರಿಸರ ಸಂರಕ್ಷಿಸಿಕೊಂಡು ಮುನ್ನಡೆಯಬೇಕಿದೆ. ಇದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ನಾವು ಭವಿಷ್ಯದ ಜನಾಂಗಕ್ಕೆ ಏನಾದರೂ ಒಳ್ಳೆಯದನ್ನು ಬಿಟ್ಟು ಹೋಗಬೇಕಿದ್ದರೆ ಅದು ಉತ್ತಮ ಪರಿಸರ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರು ಮಾತನಾಡಿ, ಬಾಗಲಕೋಟೆ ಜಿಲ್ಲೆಯಲ್ಲಿ 80 ಸಾವಿರ ಹೆಕ್ಟೇರ್‌ನಷ್ಟು ಅರಣ್ಯ ಪ್ರದೇಶವಿದ್ದು, ಈ ಪೈಕಿ ಶೇ.21ರಷ್ಟು ಅರಣ್ಯವಿದೆ. ಆದರೆ, ಅದು ಶೇ.31 ರಷ್ಟು ಇರಬೇಕಿತ್ತು. ಇನ್ನು ಶೇ.10 ರಷ್ಟು ಪರಿಸರ ಬೆಳೆಸಬೇಕಾದರೆ ಒಂದು ಕೋಟಿ ಗಿಡಗಳನ್ನು ಬೆಳೆಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಭರವಸೆ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ ಅಹೀರೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಅರಣ್ಯ ವೃದ್ಧಿ ಹಾಗೂ ಜೀವ ವೈವಿದ್ಯ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಪ್ರತಿಯೊಬ್ಬರೂ ಕನಿಷ್ಟ ಒಂದು ಸಸಿ ನೆಟ್ಟು ಅದರ ಪೋಷಣೆ ಮಾಡಬೇಕು. ವಿದ್ಯಾರ್ಥಿಗಳು ಮನೆ ಹಾಗೂ ಶಾಲೆಗಳಲ್ಲಿ ಒಂದೊಂದು ಗಿಡ ನೆಡುವ ಸಂಕಲ್ಪ ಮಾಡುವಂತೆ ಕರೆ ನೀಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್.ಗೊರವರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಗದ್ದಿ, ಬಿಟಿಡಿಎ ಮುಖ್ಯ ಅಭಿಯಂತರ ಚಂದ್ರಹಾಸ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆದರ್ಶ ವಿದ್ಯಾಲಯದ ಮುಖ್ಯೋಪಾದ್ಯಾಯ ಬಿ.ವಿ.ಪಾಟೀಲ, ತಹಸೀಲ್ದಾರ್‌ ವಾಸುದೇವ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ಪಾದನೆಯ ಶೇ.70ಕ್ಕೂ ಅಧಿಕ ಕಾಫಿ ರಫ್ತು: ಬಸವರಾಜ್‌
ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಾಸ್ಯಾಸ್ಪದ: ನವೀನ್ ನಾಯಕ್