ಹೊಸದುರ್ಗ: ಲೋಕಸಭೆ ಚುನಾವಣೆಯ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಗೆಲುವಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅವರು ಮನವಿ ಮಾಡಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಹೊಸದುರ್ಗ ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳ ಸಭೆ ನಡೆಸಿ ನೂತನವಾಗಿ ಆಯ್ಕೆಯಾದಂತಹ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ಅಧಿಕೃತವಾಗಿ ನೀಡಿ ಅಯ್ಕೆಯಾದವರಿಗೆ ಶುಭಕೋರಿ ಮಾತನಾಡಿದರು.ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಮಹತ್ವ ಹಾಗೂ ಜನರಿಗೆ ಆಗುತ್ತಿರುವ ಅನುಕೂಲದ ಬಗ್ಗೆ ಪ್ರತಿ ಮನೆ ಮನೆಗೂ ಮಾಹಿತಿ ನೀಡಬೇಕು. ಈ ಬಗ್ಗೆ ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರಕ್ಕೆ ಮತದಾರರು ಕಿವಿಗೊಡದಂತೆ ಮಾಡಬೇಕು. ಆ ಮೂಲಕ ಕಾಂಗ್ರೆಸ್ ಮತಗಳನ್ನು ಗಟ್ಟಿಗೊಳಿಸಬೇಕು. ಈ ಬಾರಿ ಅಗ್ನಿ ಪರೀಕ್ಷೆ ಆಗಿರುವ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಿಸಿ, ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರುವ ಮೂಲಕ ಬಿಜೆಪಿಗೆ ತಕ್ಕಪಾಠ ಕಲಿಸಬೇಕು ಎಂದು ತಿಳಿಸಿದರು.
ಹೊಸದುರ್ಗ ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಮಹಮದ್ ಇಸ್ಮಾಯಿಲ್, ಸದಸ್ಯರಾದ ಟಿ.ಶ್ರೀನಿವಾಸ್ ಮೂರ್ತಿ, ಡಿ.ಶರತ್, ಆರ್.ಮಂಜುನಾಥ್, ರಾಜೇಂದ್ರ ಪ್ರಸಾದ್ ನಾಯ್ಕ್, ಟಿ.ಎಂ.ಕವಿತಾ, ಕೆ.ಅನಿತಾ, ಎನ್ಎಸ್‌ಯುಐ ಉಪಾಧ್ಯಕ್ಷ ಕೆ.ಲೋಹಿತ್ ಅವರಿಗೆನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು. ಗ್ಯಾರಂಟಿ ಯೋಜನೆಯನ್ನು ವ್ಯಾಪಕವಾಗಿ ತಾಲೂಕಿನ ಎಲ್ಲೆಡೆ ಪ್ರಚಾರ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮವಹಿಸಬೇಕು ಎಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಎಂ.ಪಿ.ಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ್, ಹೊಸದುರ್ಗ ನಗರ ಘಟಕದ ಅಧ್ಯಕ್ಷ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಿಕಾ ಸತೀಶ್, ಮುಖಂಡರಾದ ಗೋ.ತಿಪ್ಪೇಶ್, ಕಾರೇಹಳ್ಳಿ ಬಸವರಾಜು, ರಾಜಣ್ಣ ಸೇರಿ ಇನ್ನಿತರ ಮುಖಂಡರು ಹಾಜರಿದ್ದರು.