ಪೋಲಿಯೋ ಮುಕ್ತ ಸಮಾಜದ ನಿಮಾರ್ಣಕ್ಕೆ ಸಹಕರಿಸಿ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Mar 03, 2024, 01:32 AM IST
ಸುವರ್ಣ2 | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್, ಸಿ.ಎಸ್.ಐ. ಲೊಂಬಾರ್ಡ್ ಸ್ಕೂಲ್ ಆಫ್ ನರ್ಸಿಂಗ್ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಅವರು ಶನಿವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್, ಸಿ.ಎಸ್.ಐ. ಲೊಂಬಾರ್ಡ್ ಸ್ಕೂಲ್ ಆಫ್ ನರ್ಸಿಂಗ್ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪೋಲಿಯೋದಿಂದ ರಕ್ಷಿಸಲು ಹಾಗೂ ಅವರ ರೋಗ ನಿರೋಧಕತೆಯನ್ನು ಹೆಚ್ಚಿಸಲು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದ ಅವರು, ಪಲ್ಸ್ ಪೋಲಿಯೋ ಲಸಿಕೆ ಕುರಿತು ಅರಿವು ಮೂಡಿಸುವುದರೊಂದಿಗೆ ಅದರಿಂದ ಉಂಟಾಗುವ ಅಂಗವೈಕಲ್ಯತೆಯನ್ನು ಹಾಗೂ ಅದರ ಭೀಕರ ಪರಿಣಾಮವನ್ನು ತಡೆಗಟ್ಟುವಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್, ನಗರಸಭಾ ಸದಸ್ಯೆ ರಶ್ಮಿ ಭಟ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ ಜ್ಯೋಸ್ನಾ ಬಿ.ಕೆ., ಡಾ. ರಾಜ್ ಗೋಪಾಲ ಭಂಡಾರಿ, ಡಾ.ವಾಸುದೇವ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ನರ್ಸಿಂಗ್ ಸ್ಕೂಲ್ ಪ್ರಾಧ್ಯಪಕರು ಹಾಗೂ ವಿದ್ಯಾರ್ಥಿಗಳು, ಜಿಲ್ಲಾ ಪೊಲೀಸ್ ಉಪನಿರೀಕ್ಷಕರ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ನಗರಸಭಾ ಅಧಿಕಾರಿ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸಮಾರೋಪಗೊಂಡಿತು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ