ಮತಪಟ್ಟಿ ಪರಿಷ್ಕರಣೆಗೆ ಸಹಕರಿಸಿ: ಡಾ.ಸಿದ್ದರಾಮಯ್ಯ

KannadaprabhaNewsNetwork |  
Published : Jun 14, 2026, 01:45 AM IST
13ಕೆಎಂಎನ್ ಡಿ14 | Kannada Prabha

ಸಾರಾಂಶ

ಮತದಾರರ ಪರಿಷ್ಕರಣಾ ಪ್ರಕ್ರಿಯೆಯು ನಕಲಿ ಮತದಾರರನ್ನು ತೆಗೆದು ಹಾಕಲು ಮತ್ತು ಹೊಸ ಮತದಾರರನ್ನು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ನಿಖರ ಮತದಾರರ ಪಟ್ಟಿ ಇಲ್ಲದೆ, ನ್ಯಾಯಯುತ ಚುನಾವಣೆಗಳು ಅಸಾಧ್ಯ. ಹಾಗಾಗಿ ಒಬ್ಬ ವ್ಯಕ್ತಿ, ಒಂದು ಮತ ಎಂಬ ಪ್ರಜಾಪ್ರಭುತ್ವದ ತತ್ವ ಬಲಪಡಿಸುತ್ತದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಅಕ್ರಮ ಹೆಸರು ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಅಧಿಕಾರಿಗಳಿಗೆ ಖಚಿತ ಮಾಹಿತಿ ನೀಡುವ ಮೂಲಕ ಬಿಎಲ್‌ಎ-2ರವರು ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುವಂತೆ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿಯಿಂದ ನಡೆದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್-2 ರವರ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಮತದಾರರ ಪರಿಷ್ಕರಣಾ ಪ್ರಕ್ರಿಯೆಯು ನಕಲಿ ಮತದಾರರನ್ನು ತೆಗೆದು ಹಾಕಲು ಮತ್ತು ಹೊಸ ಮತದಾರರನ್ನು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ನಿಖರ ಮತದಾರರ ಪಟ್ಟಿ ಇಲ್ಲದೆ, ನ್ಯಾಯಯುತ ಚುನಾವಣೆಗಳು ಅಸಾಧ್ಯ. ಹಾಗಾಗಿ ಒಬ್ಬ ವ್ಯಕ್ತಿ, ಒಂದು ಮತ ಎಂಬ ಪ್ರಜಾಪ್ರಭುತ್ವದ ತತ್ವ ಬಲಪಡಿಸುತ್ತದೆ. ಆದ್ದರಿಂದ ಬೂತ್ ಮಟ್ಟದ ಏಜೆಂಟ್-2 ಗಳು ಬಹಳ ಎಚ್ಚರಿಕೆಯಿಂದ ಅಧಿಕಾರಿಗಳಿಗೆ ನಿಖರವಾದ ಮಾಹಿತಿ ನೀಡಬೇಕು ಎಂದರು.

ಮಂಡಲ ಅಧ್ಯಕ್ಷ ಪಿ.ಹಳ್ಳಿ ರಮೇಶ್ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಹಳ ಮಹತ್ವವಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಅಕ್ರಮ ಹೆಸರು ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ನಗರಾಧ್ಯಕ್ಷ ಸುಧಾಕರ್, ಪುರಸಭಾ ಮಾಜಿ ಸದಸ್ಯ ಗಂಜಾಂ ಶಿವು, ಪ್ರಧಾನ ಕಾರ್ಯದರ್ಶಿ ನಂದೀಶ್, ಬಿಎಲ್‌ಎ-1 ಪ್ರಭಾಕರ್, ಕಿರಣ್ ಕುಮಾರ್ ಸಿಂಗ್, ಮೊಳ್ಳೇನ ಚಂದ್ರು, ಅರಕರೆ ಬೈರೇಗೌಡ, ಚಂದಗಾಲುಶಂಕರ್, ಪುಟ್ಟರಾಮು, ಮಹಿಳಾ ಮೋರ್ಚಾ ಅಧ್ಯಕ್ಷೆ ಮಾನಸ, ಜೈಶಂಕರ್, ಆನಂದ್, ಸುನೀಲ್ ಕುಮಾರ್, ಹನಿಯಂಬಾಡಿ ಸತೀಶ್, ಬಿ.ಸಿ ಕೃಷ್ಣೇಗೌಡ, ಮಂಜುನಾಥ್ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಅಭಿವೃದ್ಧಿಯೇ ನನ್ನ ಉದ್ದೇಶ ಎಂದ ಶಾಸಕ ಸಿಮೆಂಟ್ ಮಂಜು
ಮಲೆನಾಡು ಕಾಲೇಜಿನಲ್ಲಿ ಡಿಜಿಟಲ್ ಲ್ಯಾಬ್ ಉದ್ಘಾಟನೆ