ಕನ್ನಡಪ್ರಭ ವಾರ್ತೆ ಹಲಗೂರು
ಲಿಂಗಪಟ್ಟಣ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಇಲ್ಲಿನ ಡೇರಿ ಉತ್ತಮ ಲಾಭದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಲಾಭ ಬರಲು ಸಹಕಾರ ಬಹು ಮುಖ್ಯ ಎಂದರು.
ಸಂಘದಲ್ಲಿ ಕಾರ್ಯದರ್ಶಿಯಾಗಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಿದ್ದೇಗೌಡರನ್ನು ಮುಂದಿನ ದಿನಗಳಲ್ಲಿ ಮಳವಳ್ಳಿ ಪಟ್ಟಣದಲ್ಲಿ ಸನ್ಮಾನಿಸಲಾಗುತ್ತದೆ ಎಂದರು.ಇದೇ ವೇಳೆ ಸಿದ್ದೇಗೌಡರನ್ನು ಮೈಸೂರು ಪೇಟ ತೊಡಿಸಿ ಶಾಲು ಹಾಕಿ ಸನ್ಮಾನಿಸಲಾಯಿತು. ಡೇರಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗಾಗಿ
ಮಂಡ್ಯ:ಜಿಲ್ಲೆಯ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೂ.29ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಜನತಾ ಪಕ್ಷ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಅಶೋಕ್ ಜಯರಾಮ್ ತಿಳಿಸಿದರು.
ತಕ್ಷಣವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ವಾಪಸ್ ಪಡೆಯಬೇಕು. ವಿಸಿ ನಾಲೆಗಳಿಗೆ ನೀರು ವಿತರಿಸುವುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಶ್ರೀಧರ್, ನಾಗರಾಜು, ಲಿಂಗರಾಜು, ಜವರೇಗೌಡ ,ವೈರಮುಡಿ ,ವಿನಯ್ ಉಪಸ್ಥಿತರಿದ್ದರು.