ಅದ್ಧೂರಿ ದಸರಾ ಆಚರಣೆಗೆ ಸಹಕರಿಸಿ: ಎಸ್ಸೆಸ್ಸೆಂ

KannadaprabhaNewsNetwork |  
Published : Aug 31, 2025, 01:08 AM IST
30ಕೆಡಿವಿಜಿ3, 4-ದಾವಣಗೆರೆಯಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನ ಸಭೆ ಕಾರ್ಯಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ನಡೆಯಿತು. ...............30ಕೆಡಿವಿಜಿ5, 6-ದಾವಣಗೆರೆಯ ತಮ್ಮ ಗೃಹ ಕಚೇರಿ ಶಿವ ಪಾರ್ವತಿಯಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನ ಟ್ರಸ್ಟಿಗಳನ್ನುದ್ದೇಶಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿದರು. | Kannada Prabha

ಸಾರಾಂಶ

ನಾಡಹಬ್ಬ ದಸರಾ ಮಹೋತ್ಸವವನ್ನು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ಅದ್ಧೂರಿಯಾಗಿ ಆಚರಿಸಲು ಟ್ರಸ್ಟ್‌ ಕಾರ್ಯಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

- ಅಗತ್ಯ ಸಿದ್ಧತೆಗಳಿಗೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ಗೆ ಸೂಚನೆ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನಾಡಹಬ್ಬ ದಸರಾ ಮಹೋತ್ಸವವನ್ನು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ಅದ್ಧೂರಿಯಾಗಿ ಆಚರಿಸಲು ಟ್ರಸ್ಟ್‌ ಕಾರ್ಯಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಶ್ರೀ ದುರ್ಗಾಂಬಿಕಾ ದೇವಿ ಪ್ರಸಾದ ನಿಲಯದಲ್ಲಿ ಶನಿವಾರ ನಡೆದ ಸಭೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ನಾಡಹಬ್ಬ ದಸರಾವನ್ನು ಸಡಗರ, ಸಂಭ್ರಮ ಮತ್ತು ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಸಹಕರಿಸಬೇಕು. ದಸರಾ ಹಬ್ಬವೆಂದರೆ ಬರೀ ಹಬ್ಬ ಮಾತ್ರ ಅಲ್ಲ. ಅದು ನಮ್ಮ ನಾಡಿನ ಸಂಸ್ಕೃತಿ, ಹೆಮ್ಮೆಯ ಗರಿಯಾಗಿದೆ ಎಂದರು.

ಐತಿಹಾಸಿಕ ಪರಂಪರೆಯುಳ್ಳ ಹಬ್ಬವನ್ನು ಜಿಲ್ಲೆಯಲ್ಲೂ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಆಶೀರ್ವಾದದಿಂದ ಅಚ್ಚುಕಟ್ಟಾಗಿ ಆಚರಿಸೋಣ. ನಾಡಹಬ್ಬವನ್ನು ಟ್ರಸ್ಟ್‌ನಿಂದ ಆಚರಿಸಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಅವರು, ಪ್ರತಿ ವರ್ಷದಂತೆ ಟ್ರಸ್ಟ್‌ನಿಂದ ಸಾಮೂಹಿಕ ವಿವಾಹ ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಟ್ರಸ್ಟ್‌ನ ಧರ್ಮದರ್ಶಿಗಳಾದ ಅಥಣಿ ಎಸ್.ವೀರಣ್ಣ, ಮಾಜಿ ಮೇಯರ್‌ ಎಚ್.ಬಿ.ಗೋಣೆಪ್ಪ, ಬಿ.ಎಚ್. ವೀರಭದ್ರಪ್ಪ, ಗೌಡರು, ಶಾನುಭೋಗರು, ರೈತರು, ಭಾರೀಕರು, ಬಣಕಾರರು, ಕುಂಬಾರರು, ತಳವಾರರು, ಎಲ್ಲ ಬಾಬುದಾದರು, ಕಾರ್ಯಕರ್ತರು, ಭಕ್ತರು ಸಭೆಯಲ್ಲಿದ್ದರು.

ಸಮಿತಿಗೆ ಸಂಸದೆ ಸಲಹೆ:

ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ಸಕಲ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಗೃಹ ಕಚೇರಿ ಶಿವ ಪಾರ್ವತಿಯಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನ ಟ್ರಸ್ಟ್‌ಗೆ ನಿರ್ದೇಶನ ನೀಡಿದ್ದಾರೆ.

- - -

-30ಕೆಡಿವಿಜಿ3, 4:

ದಾವಣಗೆರೆಯಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನ ಸಭೆ ಕಾರ್ಯಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ವಕೀಲರಿಗೆ ಮಾಹಿತಿ ನೀಡದಿದ್ರೆ ಕ್ರಮ : ಹೈ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌