ಲೋಕ ಅದಾಲತ್ ಯಶಸ್ಸಿಗೆ ಸಹಕಾರ ನೀಡಿ: ಸಿವಿಲ್ ನ್ಯಾಯಾಧೀಶ ಯೋಗೇಶ್

KannadaprabhaNewsNetwork | Published : Nov 30, 2024 12:49 AM

ಸಾರಾಂಶ

ಎರಡೂ ಕಡೆಯ ಕಕ್ಷಿದಾರರು ಪರಸ್ಪರ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರಿಂದ ಯಾರಿಗೂ ಸೋಲಾಗದೆ ಇಬ್ಬರಿಗೂ ಜಯಸಿಕ್ಕಂತಾಗುತ್ತದೆ. ಅಲ್ಲದೇ, ಎರಡೂ ಕಡೆಯ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗುತ್ತದೆ .

ಕನ್ನಡಪ್ರಭ ವಾರ್ತೆ ನಾಗಮಂಗಲ

ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಗೊಳಿಸಲು ತಾಲೂಕು ಆಡಳಿತ, ಪೊಲೀಸ್ ಇಲಾಖೆ, ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪೂರ್ಣ ಪ್ರಮಾಣದ ಸಹಕಾರ ನೀಡಬೇಕು ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಯೋಗೇಶ್ ತಿಳಿಸಿದರು.

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ಡಿ.14ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ರಾಜೀ ಸಂಧಾನದ ಮೂಲಕ ಅತಿ ಹೆಚ್ಚು ಪ್ರಕರಣ ಇತ್ಯರ್ಥಪಡಿಸುವುದು ಲೋಕ ಅದಾಲತ್‌ನ ಮುಖ್ಯ ಉದ್ದೇಶವಾಗಿದೆ ಎಂದರು.

ಎರಡೂ ಕಡೆಯ ಕಕ್ಷಿದಾರರು ಪರಸ್ಪರ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರಿಂದ ಯಾರಿಗೂ ಸೋಲಾಗದೆ ಇಬ್ಬರಿಗೂ ಜಯಸಿಕ್ಕಂತಾಗುತ್ತದೆ. ಅಲ್ಲದೇ, ಎರಡೂ ಕಡೆಯ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.

ಚೆಕ್‌ ಬೌನ್ಸ್ ಪ್ರಕರಣ, ಅಪಘಾತ ಪ್ರಕರಣಗಳಲ್ಲಿ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು ಸೇರಿದಂತೆ ಹಲವು ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಲೋಕ ಅದಾಲತ್ ಸದುಪಯೋಗಪಡಿಸಿಕೊಳ್ಳುವ ಕುರಿತು ಅಧಿಕಾರಿಗಳು ಕಕ್ಷಿದಾರರಲ್ಲಿ ಅರಿವು ಮೂಡಿಸಬೇಕು ಎಂದರು.

ಒಂದು ಪ್ರಕರಣವನ್ನು ತಕ್ಷಣ ರಾಜೀ ಸಂಧಾನ ಮಾಡಿತೆಂದರೆ ಕಕ್ಷಿದಾರರಲ್ಲಿಯೇ ಹಲವು ರೀತಿಯ ಅನುಮಾನ ಶುರುವಾಗುತ್ತದೆ. ಎರಡೂ ಕಡೆಯ ಕಕ್ಷಿದಾರರು ಪರಸ್ಪರ ರಾಜೀ ಮಾಡಿಕೊಳ್ಳುವುದರಿಂದ ಒಬ್ಬರಿಗೆ ಸೋಲು, ಮತ್ತೊಬ್ಬರಿಗೆ ಗೆಲುವು ಎಂಬ ಪ್ರಶ್ನೆ ಉದ್ಭವಿಸದೆ ಇಬ್ಬರಿಗೂ ಜಯ ಸಿಕ್ಕಂತಾಗುತ್ತದೆ ಎಂದರು.

ಸಿವಿಲ್ ನ್ಯಾಯಾಧೀಶ ಎಚ್.ಎಸ್.ಶಿವರಾಜು, ಅಪರ ಸಿವಿಲ್ ನ್ಯಾಯಾಧೀಶ ಕೆ.ಪಿ.ಸಿದ್ದಪ್ಪಾಜಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಟಿ.ಆರ್.ಶ್ರೀದೇವಿ, ಅರುಣಾಬಾಯಿ, ವಕೀಲರ ಸಂಘದ ಅಧ್ಯಕ್ಷ ಮಹದೇವ, ತಹಸೀಲ್ದಾರ್ ಜಿ.ಆದರ್ಶ್, ತಾಪಂ ಇಒ ಸತೀಶ್, ತಾಲೂಕಿನ ಎಲ್ಲಾ ಬ್ಯಾಂಕ್‌ಗಳ ವ್ಯವಸ್ಥಾಪಕರು, ಅಬಕಾರಿ, ಅರಣ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು, ವಕೀಲರು ಮತ್ತು ಕಾನೂನು ಸೇವಾ ಸಮಿತಿಯ ಸಿಬ್ಬಂದಿ ಸೋನು ಮೂರ್ತಿ ಮತ್ತು ಎಂ.ರಮೇಶ್ ಇದ್ದರು.

Share this article