ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಕೆಆರ್‌ಎಸ್‌ನ ಸರ್.ಎಂ.ವಿಶ್ವೇಶ್ವರಯ್ಯ ಮತ್ತು ಬೆಳಕು ವಿದ್ಯಾಸಂಸ್ಥೆ ಸಹಯೋಗದೊಂದಿಗೆ ಶಾಲೆ ಆವರಣದಲ್ಲಿ ಮಕ್ಕಳಿಂದ ನಡೆದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.
ಪ್ರತಿ ವರ್ಷ ಫೆಬ್ರವರಿ 28 ರ ಈ ದಿನವನ್ನು ನೊಬೆಲ್ ಪ್ರಶಸ್ತಿ ಪುರಸ್ಕೃತ ಸರ್ ಸಿ.ವಿ ರಾಮನ್ ನೆನಪಿಗಾಗಿ ಈ ಕಾರ್ಯಕ್ರಮ ಆಚರಿಸಿಕೊಂಡು ಬರಲಾಗುತ್ತಿದೆ. ಜ್ಞಾನ, ಸುಜ್ಞಾನ, ವಿಜ್ಞಾನ, ತಂತ್ರಜ್ಞಾನ ಕಾಲಘಟ್ಟಗಳಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಹೊಂದುತ್ತ ಸಂಶೋಧನೆಗಳು ಹಿಗ್ಗುತ್ತಾ ಪ್ರಯೋಗಗಳು ಫಲ ನೀಡುತ್ತಿವೆ. ಇದರಿಂದ ವಿಜ್ಞಾನ ಸಮೃದ್ಧವಾಗಿ ಇಂದು ಬೆಳೆದು ನಿಂತಿದೆ ಎಂದು ಹೇಳಿದರು.ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಾಲಾ ಮಕ್ಕಳು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರಕ್ಕೆ ಸಂಬಂಧಿಸಿದ ಹಲವು ಮಾದರಿಗಳು ಪ್ರದರ್ಶಿಸಿ, ಪೋಷಕರು ಮತ್ತು ಅತಿಥಿಗಳಿಗೆ ವಿವರಿಸಿ ಗಮನ ಸೆಳೆದರು.
ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಅಧ್ಯಯನ ಮಾಡಬೇಕು: ಕೆ.ಎಸ್.ರಮೇಶ್
ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ಹೆಚ್ಚಿನ ಅಧ್ಯಯನ ಮಾಡಿ ದೊಡ್ಡ ದೊಡ್ಡ ವಿಜ್ಞಾನಿಗಳಾಗಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಸ್.ರಮೇಶ್ ಕರೆ ನೀಡಿದರು.
ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವಾಗಲೇ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹೆಚ್ಚಾಗಿ ತಿಳಿದುಕೊಳ್ಳುವುದು ಅಗತ್ಯ. ವಿದ್ಯಾರ್ಥಿ ಜೀವನ ಎಂಬುದು ದೊಡ್ಡ ಮಹತ್ವಾಕಾಂಕ್ಷೆಯುಳ್ಳದ್ದು. ಅದನ್ನು ವ್ಯರ್ಥ ಮಾಡದೆ ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ಶಾಲಾ ಮಕ್ಕಳಿ ವಿವಿಧ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಭವ್ಯ, ಸದಸ್ಯರಾದ ವೀರೇಶ್, ಚಂದ್ರು, ಮಧು, ಬಿ.ಎನ್.ಚಂದ್ರು, ದಿವ್ಯಾ, ಅಂಬಿಕಾ, ಅಶ್ವಿನಿ, ಆಲಕೆರೆ ಚಂದ್ರು, ಶೃತಿ, ಮುಖ್ಯಶಿಕ್ಷಕಿ ಕಲ್ಯಾಣಮ್ಮ ಇತರರು ಇದ್ದರು.