ಎಲ್ಲ ಕ್ಷೇತ್ರಗಳಲ್ಲಿ ಜಗಜೀವನ ರಾಂ ಕೊಡುಗೆ: ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ

KannadaprabhaNewsNetwork |  
Published : Apr 06, 2024, 12:47 AM IST
5ಎಚ್ಎಸ್ಎನ್8 :  | Kannada Prabha

ಸಾರಾಂಶ

ಡಾ.ಬಾಬು ಜಗಜೀವನ ರಾಂ ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ ತಿಳಿಸಿದರು. ಅರಕಲಗೂಡಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಂರ 117ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಡಾ.ಬಾಬು ಜಗಜೀವನ ರಾಂ ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ ತಿಳಿಸಿದರು.

ಪಟ್ಟಣದಲ್ಲಿ ತಾಲೂಕ ಕಚೇರಿ ಆವರಣದಲ್ಲಿ ತಾಲೂಕು ಜಿಲ್ಲಾಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಜಂಟಿಯಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಂರ 117ನೇ ಜಯಂತ್ಯುತ್ಸವದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಬಣ್ಣಿಸಿದರು.

ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಂ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಇತರ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.

ಇದಕ್ಕೂ ಮುನ್ನ ತಾಲೂಕು ಕಚೇರಿ ಆವರಣದಲ್ಲಿರುವ ಡಾ.ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಕಾಳೇಗೌಡ, ಬಿಆರ್‌ಒ ದೇವರಾಜ್, ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು ಶಿಗ್ಗಾವಿ ಠಾಕಪ್ಪ, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ರವಿಕುಮಾರ್ ಇದ್ದರು.

ಅರಕಲಗೂಡಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಂರ 117ನೇ ಜಯಂತ್ಯುತ್ಸವದಲ್ಲಿ ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ ಜಗಜವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

PREV

Recommended Stories

ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ರೈಲಲ್ಲಿ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ