- ಎಐಟಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನ, 4 ದಿನ ನಡೆಯಲಿರುವ ಸಮ್ಮೇಳನ,
ಹಳ್ಳಿಗಳ ಬೆಳವಣಿಗಾಗಿ ವಿಜ್ಞಾನಿಗಳ ಕೊಡುಗೆ ಇರಬೇಕು. ಆ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ಶೃಂಗೇರಿಯ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಗುರುವಾರ ನಗರದ ಎಐಟಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ನಾಲ್ಕು ದಿನಗಳ ಕಾಲ ಹಮ್ಮಿಕೊಂಡಿರುವ ಮಾಹಿತಿ ತಂತ್ರಜ್ಞಾನದಲ್ಲಿ ಆಗುತ್ತಿರುವ ಅಭಿವೃದ್ಧಿ ಹಾಗೂ ಬೆಳವಣಿಗೆ ಕುರಿತ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನದ ಉದ್ಘಾಟನಾ ಸಮಾರಂಭದ ಸಾನ್ನಿದ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.ವಿಜ್ಞಾನದ ಹುಟ್ಟಿಗೆ ನಿಖರವಾದ ದಿನ ಇಲ್ಲ. ಇದು, ಅನಾಧಿಕಾಲದಿಂದಲೂ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಹೊಸ ಹೊಸ ಆವಿಷ್ಕಾರಗಳೊಂದಿಗೆ ಅತಿ ವೇಗವಾಗಿ ಬೆಳೆಯುತ್ತಿದೆ. ಜ್ಞಾನವನ್ನು ವಿಜ್ಞಾನದ ಮೂಲಕ ಆಳವಾಗಿ ಅಧ್ಯಯನ ಮಾಡಬೇಕು. ಗ್ರಾಮೀಣ ಪ್ರದೇಶಗಳ ಬೆಳವಣಿಗೆ ನಿಟ್ಟಿನಲ್ಲಿ ಆ ಅಧ್ಯಯನಗಳು ಇರಬೇಕು ಎಂದು ತಿಳಿಸಿದರು.
ಪುರಾತನ ಕಾಲದಲ್ಲಿ ವಿಜ್ಞಾನ ಬೆಳೆದಿತ್ತು. ಆದರೆ, ಜನರಿಗೆ ತಲುಪಿರಲಿಲ್ಲ. ಈಗ ಯಾರು ಏನೂ ಬೇಕಾದರೂ ಆಗಬಹುದು. ಮುಕ್ತವಾದ ಅವಕಾಶ ಆದೆ. ಅದನ್ನು ಬಳಸಿಕೊಂಡು ಉನ್ನತ ಸ್ಥಾನಕ್ಕೆ ಏರಬಹುದು ಎಂದು ತಿಳಿಸಿದರು.
ಹಿಂದಿನ ಕಾಲದಲ್ಲಿ ಇಂತಹದ್ದೆ ಕಲಿತರೆ ಉದ್ಯೋಗ ಸಿಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ, ಇಂದು ಎಂಜಿನಿಯರಿಂಗ್‌ನ ಯಾವುದೇ ಶಿಕ್ಷಣ ಪಡೆದರೂ ಉದ್ಯೋಗ ಸಿಗುವ ಅವಕಾಶ ಇದೆ. ವಿದ್ಯಾರ್ಥಿಗಳು ತಮ್ಮ ಗುರಿ ಮುಟ್ಟ ಬೇಕಾದರೆ ಶಿಕ್ಷಣದ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಸಮ್ಮೇಳನದ ನಡವಳಿ ಒಳಗೊಂಡ ಪುಸ್ತಕ ಬಿಡುಗಡೆಗೊಳಿಸಲಾಯಿತು. ಹಾಸನದ ಎಂಸಿಎಫ್ ಸಂಸ್ಥೆ ನಿರ್ದೇಶಕ ಪಂಕಜ್ ಕಿಲ್ಲೇದರ್ ಕಾರ್ಯಕ್ರಮ ಉದ್ಘಾಟಿಸಿದರು. ಐಇಇಇ ಛೇರ್ಮನ್ ಡಾ. ಟಿ. ಶ್ರೀನಿವಾಸ್, ಟೆಸ್ಟ್ ಪಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ನ ಮಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಸೇಠಿಯಾ, ಎಐಟಿ ಶಿಕ್ಷಣ ಸಂಸ್ಥೆ ಸದಸ್ಯ ಕೆ. ಮೋಹನ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಪುಷ್ಪ ರವಿಕುಮಾರ್ , ಪ್ರಾಧ್ಯಾಪಕಿ ಅರ್ಪಿತಾ , ಸಂಗರೆಡ್ಡಿ ಉಪಸ್ಥಿತರಿದ್ದರು. 25 ಕೆಸಿಕೆಎಂ 1