ಕನ್ನಡಪ್ರಭ ವಾರ್ತೆ ಮೈಸೂರು
ರಾಮಕೃಷ್ಣನಗರದ ಈ ಅಂಡ್ ಎಫ್ ಬ್ಲಾಕ್ ನಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯಿಂದ ಆಯೋಜಿಸಿದ್ದ ಆದಿ ಗುರು ಶ್ರೀ ಶಂಕರಾಚಾರ್ಯರ ಹಾಗೂ ಭಗವದ್ ಶ್ರೀ ರಾಮಾನುಜಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಜಗದ್ಗುರು ಆದಿ ಶಂಕರಾಚಾರ್ಯರು ಭಾರತೀಯ ಸನಾತನ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ ಅವರು ರಚಿಸಿದ ಸ್ತೋತ್ರಗಳು ಮತ್ತು ಸೌಂದರ್ಯ ಲಹರಿ ಯಂತಹ ಕೃತಿಗಳು ಮನುಕುಲಕ್ಕೆ ದಾರಿದೀಪವಾಗಿವೆ, ವಿಶ್ವವೋ ಸಂಕಿರಣ ಪರಿಸ್ಥಿತಿಯಲ್ಲಿರುವಾಗ ಆಧ್ಯಾತ್ಮ ಮತ್ತು ಶಂಕರಾಚಾರ್ಯರ ತತ್ವಗಳ ಶಾಂತಿಯನ್ನು ನೀಡಬಲ್ಲವು ಇಂದಿನ ಜಗತ್ತಿನಲ್ಲಿ ಮನುಷ್ಯನಿಗೆ ಅತ್ಯಂತ ಕಠಿಣವಾದ ಕೆಲಸವೆಂದರೆ ಅದು ಮನಸ್ಸಿನ ನಿಯಂತ್ರಣ ಶಂಕರಾಚಾರ್ಯರ ತತ್ವಗಳನ್ನು ಮತ್ತು ಸ್ತೋತ್ರಗಳನ್ನು ಕೆಲವೊಂದರಿಂದ ಮನಸ್ಸಿಗೆ ಶಾಂತಿ ಮತ್ತು ಆತ್ಮಸ್ಥೈರ್ಯ ದೊರೆಯುತ್ತದೆ ಎಂದರು.ಭಾರತ ದೇಶವು ಆಧ್ಯಾತ್ಮಿಕವಾಗಿ ಅತ್ಯಂತ ಶ್ರೀಮಂತವಾಗಿದೆ, ಇಂತಹ ಜಯಂತಿಗಳು ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಹಕಾರಿಯಾಗಿದೆ ಮಹಾನ್ ಪುರುಷರ ಜಯಂತಿಗಳನ್ನು ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಸಂಘ-ಸಂಸ್ಥೆಗಳ ಕ್ರಮ ಶ್ಲಾಘನೀಯವಾದದ್ದು, ಶಂಕರಾಚಾರ್ಯರು ಮತ್ತು ರಾಮಾನುಜಾಚಾರ್ಯ ರಂತಹ ಮಹಾನ್ ಗುರುಗಳನ್ನು ಸ್ಮರಿಸುವುದು ನಮ್ಮ ಭಾಗ್ಯ ಎಂದು ಅವರು ಹೇಳಿದರು.
ಶ್ರೀರಾಮಾನುಜಚಾರ್ಯ ಜಯಂತಿ ಆಚರಣೆಕನ್ನಡಪ್ರಭ ವಾರ್ತೆ ಮೈಸೂರು
ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತನಾಡಿ, ರಾಮಾನುಜಾಚಾರ್ಯರು ಅತ್ಯಂತ ಶ್ರೇಷ್ಠರಲ್ಲಿ ಒಬ್ಬರು ಎಂದರು.ಕಾರ್ಯಕ್ರಮದಲ್ಲಿ ಡಾ. ಲಕ್ಷ್ಮೀದೇವಿ, ಮುರಳಿ, ಕಾರ್ಯದರ್ಶಿ ಹರೀಶ್, ಗೊಪಾಲರಾವ್, ಎಂ.ಅರ್. ಬಾಲಕೃಷ್ಣ, ಕಲ್ಕೆರೆ ನಾಗರಾಜ್, ಜಗ್ಗಣ್ಣ, ರಂಗನಾಥ್, ಅರುಣ್, ಸತ್ಯನಾರಾಯಣ್, ಸುಧೀಂದ್ರ, ಸೌಭಾಗ್ಯಮೂರ್ತಿ, ಜ್ಯೋತಿ, ಲತಾ ಬಾಲಕೃಷ್ಣ ಮೊದಲಾದವರು ಇದ್ದರು.