ಕನ್ನಡಪ್ರಭ ವಾರ್ತೆ ಹನೂರು
ಪಟ್ಟಣದ ಶ್ರೀ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಹನೂರು ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹನೂರು ತಾಲೂಕು ಕಾಡಂಚು ಮತ್ತು ಗಡಿಯಂಚಿನ ತಾಲೂಕಾಗಿದ್ದು, ಶಾಲೆಗಳಿಗೆ ಸಾರಿಗೆ ಸಮಸ್ಯೆ ಇದೆ. ಇದನ್ನು ಬಗೆಹರಿಸಲು ಈಗಾಗಲೇ ಬಸ್ ಘಟಕ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಾರಿಗೆ ಸಮಸ್ಯೆ ಬಗೆಹರಿಯಲಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಭವನವನ್ನು ಈಗಿರುವ ಬಿಇಒ ಕಚೇರಿ ಪಕ್ಕದಲ್ಲೇ ನಿರ್ಮಿಸಲು ಪ್ರಯತ್ನ ಮಾಡೋಣ, ಅದಕ್ಕೆ ದಾಖಲೆಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.ಖಾಸಗಿ ಶಾಲೆಗಳಿಗೆ ಹೋಗುವ ಮಕ್ಕಳು ಮತ್ತೆ ಸರ್ಕಾರಿ ಶಾಲೆಗೆ ಬರುವಂತಾಗಬೇಕು. ಇದಕ್ಕಾಗಿ ಶಿಕ್ಷಕರು ತಮ್ಮ ಅನುಭವ ಮತ್ತು ವಿದ್ವತ್ತನ್ನು ಮಕ್ಕಳಿಗೆ ಧಾರೆ ಎರೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಹನೂರು ವಲಯದಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.