-ಜಿಲ್ಲಾ ಮಟ್ಟದ 3ನೇ ಮಹಿಳಾ ಸಾಹಿತ್ಯ ಸಮ್ಮೇಳನ । ಕಸಾಪ ಜಿಲ್ಲಾ. ತಾಲೂಕು ಘಟಕ ಸಹಯೋಗ
ಕನ್ನಡಪ್ರಭ ವಾರ್ತೆ ಭಾಲ್ಕಿ ಸಮಾಜ, ಕುಟುಂಬ, ಸಾಹಿತ್ಯ, ಮತ್ತು ದೇಶದ ಅಭಿವೃದ್ಧಿಗೆ ಮಹಿಳೆಯರ ಕೊಡುಗೆ ಅನನ್ಯ ಎಂದು ಭಾತಂಬ್ರಾ ನಿರಂಜನ ಸಂಸ್ಥಾನ ಮಠದ ಜಗದ್ಗುರು ಶಿವಯೋಗೀಶ್ವರ ಸ್ವಾಮಿ ನುಡಿದರು.ಕಸಾಪ ಜಿಲ್ಲಾ ಮತ್ತು ತಾಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಮೂರನೆಯ ಮಹಿಳಾ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ತಾಯಿಯಾಗಿ, ಮಾರ್ಗದರ್ಶಕಿಯಾಗಿ ಮತ್ತು ಸಾಧಕಿಯಾಗಿ ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಕನ್ನಡ ಸಾಹಿತ್ಯ ಉಳಿಸುವಲ್ಲಿಯೂ ಮಹಿಳೆಯರ ಕೊಡುಗೆಯು ಶ್ರೇಷ್ಠವಾಗಿದೆ ಎಂದು ತಿಳಿಸಿದರು.ಧಾರವಾಡದ ಹಿರಿಯ ಸಾಹಿತಿ ಡಾ.ಕಾವ್ಯಶ್ರೀ ಮಹಾಗಾಂವಕರ್ ಸಮಾರೋಪ ನುಡಿಗಳನ್ನಾಡಿದರು.ಸಮ್ಮೇಳನದ ಸರ್ವಾಧ್ಯಕ್ಷೆ ಮಲ್ಲಮ್ಮ ಆರ್ ಪಾಟೀಲ್, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನಶೆಟ್ಟಿ, ತಾಲೂಕು ಅಧ್ಯಕ್ಷ ನಾಗಭೂಷಣ ಮಾಮಡಿ, ಉಪಾಧ್ಯಕ್ಷ ಕಾಶಿನಾಥ ಲದ್ದೆ, ನಗರ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಪ್ರಧಾನ ಕಾರ್ಯದರ್ಶಿ ರಾಜಪ್ಪ ಪಾಟೀಲ್, ಅಶೋಕ ಬಾವುಗೆ, ಚಂದ್ರಕಾಂತ ತಳವಾಡೆ, ಸುಭಾಷ ಕಾರಾಮುಂಗೆ, ಎಸ್.ಎಸ್.ಶಿವಣಕರ, ಎಸ್.ಎಸ್.ಮೈನಾಳೆ, ವೀರಣ್ಣ ಕಾರಬಾರಿ, ಬಸವರಾಜ ದಾನಾ, ಶ್ರೀಕಾಂತ ಭೋರಾಳೆ, ಶಿವರಾಜ ಮಲ್ಲೇಶಿ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು, ವಲಯ ಕಸಾಪದ ಅಧ್ಯಕ್ಷ ಹಾಜರಿದ್ದರು. ಜಿಲ್ಲಾ ಕಸಾಪ ಕೋಶಾಧ್ಯಕ್ಷ ಶಿವಶಂಕರ ಟೋಕರೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.
----ಬಾಕ್ಸ್-----ನಾಲ್ಕು ನಿರ್ಣಯಗಳ ಅಂಗೀಕಾರ