ಶಾಲಾ ಮಟ್ಟದಲ್ಲಿ ಕ್ರಿಸ್‌ಮಸ್‌ ಆಚರಣೆ ನಿಯಂತ್ರಿಸಿ: ವಿಹಿಂಪ ಬಜರಂಗದಳ

KannadaprabhaNewsNetwork |  
Published : Dec 13, 2023, 01:00 AM IST
ಚಿತ್ರ 1,2 | Kannada Prabha

ಸಾರಾಂಶ

Control Christmas Celebration At School Says Hindu Parishad

ಹಿರಿಯೂರು: ಶಾಲಾ ಮಟ್ಟದಲ್ಲಿ ಕ್ರಿಸ್‌ಮಸ್‌ ಆಚರಣೆ ತಡೆಯಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆ ಕಂಡು ಬಂದಿದೆ. ಈ ವೇಳೆ ಶಾಲಾ ಆಡಳಿತ ಮಂಡಳಿಯವರು ಎಲ್ಲಾ ಮಕ್ಕಳಿಗೂ ಸಾಂತಾಕ್ಲಾಸ್ ವೇಷ ಧರಿಸುವಂತೆ ಒತ್ತಡ ಹೇರುವುದು ಕಂಡು ಬಂದಿದೆ. ಈ ಬಗ್ಗೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಮಕ್ಕಳು ಹೆಚ್ಚಿರುವ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆ ಮಾಡುವುದು ಒಂದು ರೀತಿ ಮತಪ್ರಚಾರ. ಅನ್ಯ ಧರ್ಮಿಯರ ಆಚರಣೆ ನಮ್ಮ ಮಕ್ಕಳ ಮೇಲೆ ಹೇರುತ್ತಿರುವುದು ಖಂಡನೀಯ. ಈ ರೀತಿ ಆಚರಣೆ ಸಾಮೂಹಿಕವಾಗಿ ಆಚರಿಸದಂತೆ ಸುತ್ತೋಲೆ ಹೊರಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್ ಮಸ್ಕಲ್, ತಾಲೂಕು ಕಾರ್ಯದರ್ಶಿ ವೆಂಕಟೇಶ್, ಗೋವರ್ಧನ್, ವಿಶ್ವನಾಥ್, ಹರೀಶ್, ಪ್ರಭಾಕರ್, ಚೇತನ್, ಶ್ರೀಧರ್ ಮುಂತಾದವರು ಹಾಜರಿದ್ದರು.

--------------

1&2

ಕ್ರಿಸ್‌ಮಸ್ ಆಚರಣೆ ಎಲ್ಲಾ ಮಕ್ಕಳ ಮೇಲೆ ಹೇರಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ತಾಲೂಕು ಘಟಕದಿಂದ ಬಿಇಒ ಸಿಎಂ ತಿಪ್ಪೇಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು