ಮಧುಮೇಹ ಆರಂಭದಲ್ಲೇ ನಿಯಂತ್ರಿಸಿ: ಡಾ. ನಾಗೇಶ್

KannadaprabhaNewsNetwork |  
Published : Nov 18, 2026, 01:45 AM IST
16ಎಚ್ಎಸ್ಎನ್15 :  | Kannada Prabha

ಸಾರಾಂಶ

ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ರೋಗಗಳ ಆರಂಭಿಕ ಪತ್ತೆಗೆ ಸರ್ಕಾರದ ಎನ್‌ಸಿಟಿ ಕಾರ್ಯಕ್ರಮ ಸಹಕಾರಿಯಾಗಿದೆ .

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮಧುಮೇಹವನ್ನು ನಿರ್ಲಕ್ಷಿಸಿದರೆ ಕಿಡ್ನಿ ವೈಫಲ್ಯ, ಹೃದಯ ಕಾಯಿಲೆ, ನರಗಳ ಹಾನಿ ಹಾಗೂ ಗ್ಯಾಂಗ್ರಿನ್‌ನಂತಹ ಗಂಭೀರ ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ಆರಂಭಿಕ ಹಂತದಲ್ಲಿಯೇ ರೋಗ ಪತ್ತೆಹಚ್ಚಿ ನಿಯಂತ್ರಣಕ್ಕೆ ತರುವುದು ಅತ್ಯಗತ್ಯ ಎಂದು ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಕೆ. ನಾಗೇಶ್ ತಿಳಿಸಿದರು.

ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಬೃಹತ್ ಜನಜಾಗೃತಿ ಜಾಥಾದಲ್ಲಿ ಮಾತನಾಡಿ, ಭಾರತದಲ್ಲಿ ೧೦.೧ ಕೋಟಿ ಜನರುಮಧುಮೇಹದಿಂದ ಹಾಗೂ ೧೩.೬ ಕೋಟಿ ಜನರು ಮಧುಮೇಹ ಪೂರ್ವ ಸ್ಥಿತಿಯಿಂದ ಬಳಲುತ್ತಿದ್ದಾರೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಬಿ. ಆರ್‌. ಯುವರಾಜ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ರೋಗಗಳ ಆರಂಭಿಕ ಪತ್ತೆಗೆ ಸರ್ಕಾರದ ಎನ್‌ಸಿಟಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಡಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಧುಮೇಹ, ರಕ್ತದೊತ್ತಡ ಹಾಗೂ ಕ್ಯಾನ್ಸರ್‌ ಸೇರಿದಂತೆ ಮತ್ತು ವ್ಯಾಯಾಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು.ಪೊಲೀಸ್ ಸಿಬ್ಬಂದಿ, ಕ್ಯಾಬ್ ಚಾಲಕರು ಹಾಗೂ ಆಟೋ ಚಾಲಕರಿರು ಸೇರಿ ಒಟ್ಟು ೪೩೦ ಮಂದಿಯನ್ನು ರಕ್ತದಲ್ಲಿನ ಸಕ್ಕರೆ ಪ್ರಮಾಣದ ಉಚಿತ ತಪಾಸಣೆ ನಡೆಸಲಾಯಿತು.

ಜಾಥಾ ಕಾರ್ಯಕ್ರಮದಲ್ಲಿ ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಡಾ. ಭಾರತಿ ನಾಗೇಶ್ ಮತ್ತಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲಾಶ್ರೀ ಉತ್ತಮ ವೇದಿಕೆ: ಜಿಪಂ ಸಿಇಒ
ತೋಂಟದ ಸಿದ್ಧಲಿಂಗ ಶ್ರೀಗೆ ಮಕ್ಕಳ ಬಗ್ಗೆ ಅಪಾರ ಕಾಳಜಿ ಇತ್ತು: ಈಶಣ್ಣ ಬೆಟಗೇರಿ