ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ರಾಜ್ಯಾದ್ಯಂತ ಖನಿಜ ಸಾಗಾಣಿಕೆ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಲು ಸೂಚಿಲಾಗಿತ್ತು. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 1636 ವಾಹನಗಳಿಗೆ ಜಿಪಿಎಸ್ ಅಳವಡಿಸಿ, ಅವುಗಳ ಚಾಲನೆ ಮತ್ತು ಪರಿಶೀಲನೆ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದರು.
ಕಂಟ್ರೋಲ್ ರೂಂ ನಲ್ಲಿ ಮಾಹಿತಿಯನ್ನು ಪರಿಶೀಲಿಸಿ ನಿಯಮ ಉಲ್ಲಂಘನೆ ಮಾಡಿರುವ ವಾಹನಗಳಿಗೆ ಕೇಂದ್ರ ಕಚೇರಿಯ ಆದೇಶದಂತೆ ಪ್ರತಿ ವಾಹನಗಳಿಗೆ ₹10 ಸಾವಿರ ದಂಡ ವಿಧಿಸಲಾಗುತ್ತಿದೆ ಎಂದು ತಿಳಿಸಿದರು.ಅದರಂತೆ ಜಿಲ್ಲೆಯ 60 ವಾಹನಗಳಿಗೆ ದಂಡ ವಿಧಿಸಿ, ನೋಟಿಸ್ ಜಾರಿ ಮಾಡಲಾಗಿದೆ. ದಂಡ ಸಂದಾಯಿಸದೇ ಇದ್ದ ವಾಹನಗಳಿಗೆ ಸಾರಿಗೆ ಇಲಾಖೆಯವರು ದಂಡ ಸಂದಾಯಿಸಲು ಸಹಕಾರ ನೀಡುತ್ತಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ವಿವರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಸುಮಿತ್ರಾ, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಚಿಕ್ಕೋಡಿ ವಿಭಾಗದ ಪರಿಸರ ಅಧಿಕಾರಿ ಶೋಭಾ, ಬೆಳಗಾವಿ ವಿಭಾಗದ ಪರಿಸರ ಅಧಿಕಾರಿ ವಿ.ರಮೇಶ, ಅರಣ್ಯ ಇಲಾಖೆ, ಜಿಲ್ಲಾ ಪಂಚಾಯತ್, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.