ಸಾಂಕ್ರಾಮಿಕ ರೋಗಗಳ ತಡೆಗೆ ಸೊಳ್ಳೆಗಳ ನಿಯಂತ್ರಿಸಿ: ಎಸ್.ಡಿ. ಬೆನ್ನೂರ

KannadaprabhaNewsNetwork |  
Published : May 22, 2026, 02:30 AM IST
ಪೊಟೋ- ಪಟ್ಟಣದ ಬಾಪೂಜಿ ಐಟಿಐ ಕಾಲೇಜಿನಲ್ಲಿ ಡೆಂಗ್ಯೂ ರೋಗದ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮದ ಕುರಿತ  ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಎಸ್.ಡಿ.ಬೆನ್ನೂರ ಮಾತನಾಡಿದರು.  | Kannada Prabha

ಸಾರಾಂಶ

ಪ್ರಸ್ತುತ ಪೂರ್ವ ಮುಂಗಾರು ಮಳೆಗಾಲ ಪ್ರಾರಂಭವಾಗಿದ್ದು, ಅಲ್ಲಲ್ಲಿ ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳ ಉತ್ಪತ್ತಿಯಾಗುತ್ತವೆ. ನೀರನ್ನು ಶೇಖರಣಾ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತಿದೆ.

ಲಕ್ಷ್ಮೇಶ್ವರ: ಡೆಂಘೀ ಜ್ವರ ನಿಯಂತ್ರಣಕ್ಕೆ ಜನ ಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೇ ಪರಿಹಾರವಾಗಿದೆ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಪಟ್ಟಣದ ಬಾಪೂಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಡೆಂಘೀ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಪೂರ್ವ ಮುಂಗಾರು ಮಳೆಗಾಲ ಪ್ರಾರಂಭವಾಗಿದ್ದು, ಅಲ್ಲಲ್ಲಿ ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳ ಉತ್ಪತ್ತಿಯಾಗುತ್ತವೆ. ನೀರನ್ನು ಶೇಖರಣಾ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತಿದೆ. ಇದರಿಂದ ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಹೆಚ್ಚಾಗುವ ಸಂಭವ ಇರುತ್ತದೆ ಎಂದರು.

ಜ್ವರ ಪ್ರಕರಣ ಕಂಡುಬಂದ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿ, ಉಚಿತ ಚಿಕಿತ್ಸೆ ಪಡೆಯಬೇಕು ಹಾಗೂ ಮಲಗುವಾಗ ಸೊಳ್ಳೆ ಪರದೆ ಬಳಸಿ, ಮನೆಯಲ್ಲಿಯ ನೀರಿನ ಪರಿಕರಗಳನ್ನು ವಾರಕ್ಕೊಮ್ಮೆ ತಿಕ್ಕಿ ತೊಳೆದು ನೀರನ್ನು ಭರ್ತಿ ಮಾಡಿ ಭದ್ರವಾಗಿ ಮುಚ್ಚಿಡಿ. ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾಗುವ ಎಲ್ಲ ರಕ್ಷಣಾ ವಿಧಾನಗಳನ್ನು ಅನುಸರಿಸಿ ಎಂದರು.ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಫ್. ಹನಕನಹಳ್ಳಿ ಮಾತನಾಡಿ, ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆ ಮನೆಗೆ ಭೇಟಿ ನೀಡುವ ಅರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಜನರು ಸಹಕಾರ ನೀಡಬೇಕು. ಸಲಹೆಗಳನ್ನು ಪಾಲಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಕೆ. ನಾಗರಾಜಪ್ಪ ಹಾಗೂ ಸಿಬ್ಬಂದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಫ್.ಬಿ. ಹೂಗಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಸಿ. ಹಿರೇಮಠ, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ. ಬಣಗಾರ, ಕೆ.ಎಂ. ಕುಲಕರ್ಣಿ ಹಾಗೂ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುಜೀತ್ ನಾಯ್ಕರ ವಿನೂತನ ಕಲ್ಪನೆ ಮಾದರಿ: ಸುರೇಶ ನಾಯ್ಕ
ಅಕ್ರಮ ಗೋಸಾಗಾಟ, ಗೋಹತ್ಯೆ ನಿಯಂತ್ರಣಕ್ಕೆ ಆಗ್ರಹ