- ಹೊನ್ನಾಳಿ ತಾಲೂಕಿನಲ್ಲಿ 49 ಡೆಂಘೀ, 2 ಚಿಕೂನ್ ಗುನ್ಯ ಪ್ರಕರಣ
- - - ಕನ್ನಡಪ್ರಭ ವಾರ್ತೆ ಹೊನ್ನಾಳಿಡೇಂಘೀಜ್ವರ ಪ್ರಕರಣಗಳು ಹೊನ್ನಾಳಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಬಗ್ಗೆ ವರದಿಯಾಗಿದೆ. ಆದ್ದರಿಂದ ಶಾಲಾ- ಕಾಲೇಜು ಮತ್ತು ವಿದ್ಯಾರ್ಥಿ ನಿಯಲಗಳಲ್ಲಿ ಕಡ್ಡಾಯವಾಗಿ ಸೊಳ್ಳೆ ನಿಯಂತ್ರಣಕ್ಕೆ ಸ್ಥಳೀಯ ಆಡಳಿತ ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ತಾಕೀತು ಮಾಡಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನವರಿಯಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ 49 ಡೆಂಘೀ ಹಾಗೂ 2 ಚಿಕೂನ್ ಗುನ್ಯಾ ಪ್ರಕರಣ ವರದಿಯಾಗಿವೆ. ಪಟ್ಟಣದಲ್ಲಿ ಸ್ವಚ್ಛತೆ ಕಡೆಗೆ ಹೆಚ್ಚು ಗಮನ ಹರಿಸಬೇಕು. ನಿವೇಶಗಳಲ್ಲಿ ಎಸೆಯಲ್ಪಡುವ ತೆಂಗಿನ ಚಿಪ್ಪುಗಳು, ಹಳೆ ಟೈಯರ್‌ಗಳು, ಪ್ಲಾಸ್ಟಿಕ್ ಚೀಲಗಳು ಮತ್ತು ಬಾಟಲಿಗಳಲ್ಲಿ ನೀರು ಸಂಗ್ರಹ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಸಾರ್ವಜನಿಕರು ಕಡ್ಡಾವಾಗಿ ಸೊಳ್ಳೆ ಪರದೆ ಬಳಸಬೇಕು. ಜತೆಗೆ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿನ ಜಾಗೃತಿ ಮೂಡಿಸುವ ಕೆಲಸ ತ್ವರಿತವಾಗಿ ಆಗಬೇಕಿದೆ. ಹಾಸ್ಟೆಲ್‌ಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಸಮಾಜ ಕಲ್ಯಾಣ ಇಲಾಖೆಗಳು ಮುಂದಾಗಬೇಕು ಎಂದು ತಿಳಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಪ್ಪ ಮಾತನಾಡಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗಳಿಗೆ ಭೇಟಿ ನೀಡಿ ಲಾರ್ವ ಸಮೀಕ್ಷೆಗೆ ಮುಂದಾಗಬೇಕು. ಜ್ವರ, ಕಣ್ಣು, ಮೈಕೈ ನೋವು, ಮೈ ಮೇಲೆ ಗಂದೆಯಂತಹ ಕಲೆಗಳು ಕಾಣಿಸಿಕೊಂಡರೆ ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ಹೋಗಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜನರಿಗೆ ಸೂಚಿಸಬೇಕು ಎಂದರು.ಸಭೆಯಲ್ಲಿ ಹೊನ್ನಾಳಿ ತಹಸೀಲ್ದಾರ್ ಪಟ್ಟರಾಜಗೌಡ, ನ್ಯಾಮತಿ ತಹಸೀಲ್ದಾರ್ ಗೋವಿಂದಪ್ಪ, ತಾಪಂ ಇಒ ರಾಘವೇಂದ್ರ, ಪುರಸಭೆ ಮುಖ್ಯಾಧಿಕಾರಿ ಟಿ.ಲೀಲಾವತಿ, ತಾಲೂಕುಮಟ್ಟದ ಅಧಿಕಾರಿಗಳು ಇದ್ದರು.
- - - -5ಎಚ್.ಎಲ್.ಐ1: