ಬೆಲೆ ಏರಿಕೆ ನಿಯಂತ್ರಿಸಿ, ಬಸ್ ಪ್ರಯಾಣ ದರ ಇಳಿಸಿ

KannadaprabhaNewsNetwork |  
Published : Nov 08, 2026, 02:00 AM IST
ಬಸ್ ಪ್ರಯಾಣ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಜನತಾ ದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ಶನಿವಾರ ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆಯ ವಸ್ತುಗಳು ಹಾಗೂ ವಿವಿಧ ಸೇವೆಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಬಡವರು, ಮಧ್ಯಮ ವರ್ಗದವರು ಮತ್ತು ಸಾಮಾನ್ಯ ಜನರು ಜೀವನ ನಿರ್ವಹಿಸುವುದು ಕಷ್ಟವಾಗಿದೆ.

ಹುಬ್ಬಳ್ಳಿ:

ಬಸ್ ಪ್ರಯಾಣ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಜನತಾ ದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ಶನಿವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆಯ ವಸ್ತುಗಳು ಹಾಗೂ ವಿವಿಧ ಸೇವೆಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಬಡವರು, ಮಧ್ಯಮ ವರ್ಗದವರು ಮತ್ತು ಸಾಮಾನ್ಯ ಜನರು ಜೀವನ ನಿರ್ವಹಿಸುವುದು ಕಷ್ಟವಾಗಿದೆ. ಸರ್ಕಾರ ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕಿ, ಬಸ್ ಪ್ರಯಾಣ ದರವನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತವಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಆರ್‌ಎಸ್‌ಎಸ್ ಸೇರಿದಂತೆ ವಿವಿಧ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುವುದರಲ್ಲೇ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.

ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರಿಗೆ ಸೂಕ್ತ ಪರಿಹಾರ ನೀಡುವುದರ ಜತೆಗೆ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಆಡಳಿತ ವ್ಯವಸ್ಥೆಯನ್ನು ಸರಿಪಡಿಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಗುರುರಾಜ ಹುಣಶಿಮರದ ಒತ್ತಾಯಿಸಿದರು.

ಮಾಜಿ ಶಾಸಕ ವೀರಭದ್ರಪ್ಪ ಹಾಲಿಹರವಿ ಮಾತನಾಡಿ, ಸರ್ಕಾರದ ಜನವಿರೋಧಿ ನೀತಿಗಳಿಂದ ಜನರು ಬೇಸತ್ತಿದ್ದು, ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಳ್ಳಿಗುಗ್ಗು ಎಂದು ಟೀಕಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಯನ್ನು ಇದೇ ವೇಳೆ ಖಂಡಿಸಿದರು.

ಈ ಸಂದರ್ಭದಲ್ಲಿ ಅಹ್ಮದ್ ಅರಸಿಕೇರಿ, ಪೂರ್ಣಿಮಾ ಸವದತ್ತಿ, ಭೀಮರಾಯ ಗುಡೇನಕಟ್ಟಿ, ಪುನೀತ ಅಡಿಗಲ್, ಬಾಶಾ ಶಾ ಮುದ್ಗಲ್, ಶ್ರೀಕಾಂತ್ ತೇಲಗಾರ, ವಿನಾಯಕ ಗಾಡಿವಡ್ಡರ್, ಮಂಜುನಾಥ ಹಗೇದಾರ, ಚಿದಾನಂದ ನಾಡಗೌಡ, ಶಂಕರ ಪವಾರ ಹಾಗೂ ಸಿದ್ದು ಮಹಾಂತ ಒಡೆಯರ್ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ