ಈಡಿಸ್ ಸೊಳ್ಳೆಗಳ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಎಸ್.ಡಿ.ಬೆನ್ನೂರ್

KannadaprabhaNewsNetwork |  
Published : Jun 17, 2025, 05:12 AM IST
16ಕೆಎಂಎನ್ ಡಿ21 | Kannada Prabha

ಸಾರಾಂಶ

ಮಳೆಗಾಲದಲ್ಲಿ ಘನ ತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಮನೆ ಹಾಗೂ ಶಾಲಾ ಸುತ್ತಮುತ್ತ ಒಳಾಂಗಣ, ಹೊರಾಂಗಣದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಡೆಂಘೀ ಹಾಗೂ ಚಿಕೂನ್ ಗುನ್ಯಾ ನಿಯಂತ್ರಣದಲ್ಲಿ ರೋಗ ಹರಡುವ ಈಡಿಸ್ ಸೊಳ್ಳೆಗಳ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ತಾಲೂಕಿನ ಕೆಆರ್ ಸಾಗರ್ ಆರೋಗ್ಯ ಸಂಸ್ಥೆ ವ್ಯಾಪ್ತಿಯ ಹೊಸ ಉಂಡವಾಡಿ ಗ್ರಾಮದ ಗಾಯತ್ರಿ ವಿದ್ಯಾ ಸಂಸ್ಥೆಯಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾ ರೋಗ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಪಾತ್ರ ಕುರಿತು ಏರ್ಪಡಿಸಿದ್ದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಳೆಗಾಲದಲ್ಲಿ ಘನ ತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಮನೆ ಹಾಗೂ ಶಾಲಾ ಸುತ್ತಮುತ್ತ ಒಳಾಂಗಣ, ಹೊರಾಂಗಣದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ನಂತರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ ಮಾತನಾಡಿ, ಮೈತುಂಬ ಬಟ್ಟೆ ಧರಿಸಬೇಕು. ಹಗಲು ಹೊತ್ತಿನಲ್ಲಿ ನಿದ್ರಿಸುವ, ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರು ತಪ್ಪದೇ ಸೊಳ್ಳೆ ಪರದೆ ಉಪಯೋಗಿಸಬೇಕು. ಮನೆ ಕಿಟಕಿ, ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಗ್ಯಾಲರಿ ಅಳವಡಿಸಿಕೊಳ್ಳಬೇಕು. ಸ್ವಯಂ ರಕ್ಷಣಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಸ್ಥೆ ಸಂಸ್ಥಾಪಕ ಪ್ರವೀಣ ಕುಮಾರ್, ಮುಖ್ಯ ಶಿಕ್ಷಕಿ ನಿರ್ಮಲಾ, ಆರೋಗ್ಯ ನಿರೀಕ್ಷಣಾಧಿಕಾರಿ ರಮ್ಯಾ, ಆಶಾ ಕಾರ್ಯಕರ್ತೆ ಮಾಲಿನಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!