ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ

KannadaprabhaNewsNetwork |  
Published : Nov 12, 2026, 02:00 AM IST
11ಜಿಡಿಜಿ9 | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು.

ಜಿಲ್ಲಾ ಮಟ್ಟದ ಪ.ಜಾ, ಪ.ಪಂ. ಜಾಗೃತ ಮತ್ತು ಉಸ್ತುವಾರಿ (ದೌರ್ಜನ್ಯ ನಿಯಂತ್ರಣ) ಸಮಿತಿ ಸಭೆ

ಕನ್ನಡಪ್ರಭ ವಾರ್ತೆ ಗದಗ

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ.ಜಾ, ಪ.ಪಂ. ಜಾಗೃತ ಮತ್ತು ಉಸ್ತುವಾರಿ (ದೌರ್ಜನ್ಯ ನಿಯಂತ್ರಣ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಜಿಲ್ಲೆಯ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮೂಲಸೌಕರ್ಯ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಬೇಕು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಯಾವುದೇ ತಾರತಮ್ಯಕ್ಕೆ ಆಸ್ಪದ ನೀಡದೆ ಗುಣಮಟ್ಟದ ಶಿಕ್ಷಣ ನೀಡಬೇಕು. ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಡಿ ಬರುವ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯಗಳು ಅರ್ಹರಿಗೆ ಸಕಾಲದಲ್ಲಿ ತಲುಪಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸಭೆಯಲ್ಲಿ ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸರ್ಕಾರಿ ವಕೀಲ ಮಲ್ಲಿಕಾರ್ಜುನಗೌಡ ದೊಡ್ಡನಗೌಡ್ರ, ಪಿಯು ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಡಿಡಿಪಿಐ ಕೆ.ಡಿ. ಬಡಿಗೇರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್, ನಾಮನಿರ್ದೇಶಿತ ಸದಸ್ಯರಾದ ಶರೀಫ್ ಬಿಳೆಯಲಿ, ವಿನಾಯಕ ಎಸ್. ಬಳ್ಳಾರಿ, ತುಕ್ಕಪ್ಪ ಚಂದಪ್ಪ ಪೂಜಾರ, ಸಂಗಮೇಶ ಹಾದಿಮನಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿ, ವಂದಿಸಿದರು.ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಧನ ವಿತರಣೆಯಲ್ಲಿ ವಿನಾಕಾರಣ ವಿಳಂಬ ಧೋರಣೆ ತೋರಬಾರದು. ಪರಿಶಿಷ್ಟ ಸಮುದಾಯದ ಕಾಲನಿಗಳಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಿ ಅರ್ಹರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು.

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀಪಾವಳಿಲೀ ರಾಕೆಟ್‌ನಂತೆ ಹಾರಿದ ವಾಯು ಮಾಲಿನ್ಯ!
ಕೌಟುಂಬಿಕ ಕೇಸಲ್ಲಿ ಕುಟುಂಬ ಸಿಲುಕಿಸುವುದು ತರವಲ್ಲ: ಕೋರ್ಟ್‌